Belagavi

ಬಿಜೆಪಿ ಬೆಂಬಲಿತ ನೂತನ ಗ್ರಾ.ಪಂ.ಸದಸ್ಯರಿಗೆ ಮಾಜಿ ಶಾಸಕ ಸಂಜಯ್ ಪಾಟೀಲ್ ಸತ್ಕಾರ

Share

ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಸುತ್ತಮುತ್ತಲಿನ ಗ್ರಾಮ ಪಂಚಾಯತಿಗಳಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಗೆದ್ದಿರುವ ಸದಸ್ಯರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಶುಕ್ರವಾರ ಸುಳೇಭಾವಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್‍ರ ಪುತ್ಥಳಿಗೆ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಗ್ರಾಮೀಣ ಮತಕ್ಷೇತ್ರದ ಮಾರಿಹಾಳ, ಸುಳೇಭಾವಿ, ಸಾಂಬ್ರಾ, ಬಾಳೇಕುಂದ್ರಿ ಕೆ.ಎಚ್., ಬಾಳೇಕುಂದ್ರಿ ಬಿ.ಕೆ., ಮೋದಗಾ, ಮುತಗಾ, ಶಿಂದೊಳ್ಳಿ, ನಿಲಜಿ ಗ್ರಾಮದ ಬಿಜೆಪಿ ಬೆಂಬಲಿತ ನೂತನ ಗ್ರಾಮ ಪಂಚಾಯತ ಸದಸ್ಯರನ್ನು ಸತ್ಕರಿಸಲಾಯಿತು.

: ನಂತರ ಮಾತನಾಡಿ ಮಾಜಿ ಶಾಸಕ ಸಂಜಯ್ ಪಾಟೀಲ್ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಎರಡೂ ಸರ್ಕಾರಗಳು ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿವೆ. ಭವಿಷ್ಯದಲ್ಲಿ ವಿಶ್ವಗುರು ಭಾರತವನ್ನಾಗಿಸಲು ಜನಪ್ರತಿನಿಧಿಗಳ ಕೊಡುಗೆ ಮಹತ್ವದ್ದಾಗಿದೆ. ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಕರೆ ನೀಡಿದರು.
ಈ ವೇಳೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯುವರಾಜ ಜಾಧವ, ಮುಖಂಡರಾದ ರಾಜು ದೇಸಾಯಿ, ಶಂಕರ ಜತ್ರಾಟ, ಮಲ್ಲಿಕಾರ್ಜುನ ಮಾದಮ್ಮನವರ, ಉಮೇಶ ಪುರಿ, ರಮೇಶ ಸರವದೆ, ನಾನಪ್ಪಾ ಪಾರ್ವತಿ ಸೇರಿದಂತೆ ನೂತನ ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.

Tags:

error: Content is protected !!