Politics

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಮಾಡಿ ದೂರು ಸಲ್ಲಿಸಿದ ಶಾಸಕ ರೇಣುಕಾಚಾರ್ಯ

Share

ರಾಜ್ಯ ಸಂಪುಟದಲ್ಲಿ ತಮಗೆ ಸ್ಥಾನ ಸಿಗದಿರುವ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ ದೆಹಲಿಗೆ ತೆರಳಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಮಾಡಿ ದೂರು ಸಲ್ಲಿಸಿದ್ದಾರೆ. ಸಿ.ಪಿ.ಯೋಗೇಶ್ವರ್ ಸಂಪುಟ ಸೇರ್ಪಡೆ, ಸಚಿವ ರಮೇಶ ಜಾರಕಿಹೊಳಿ ಅವರ ವರ್ತನೆ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ.

ರಾಜ್ಯ ಸಂಪುಟದಲ್ಲಿ ತಮಗೆ ಸ್ಥಾನ ಸಿಗದಿರುವ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ.
ಈ ವೇಳೆ ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ, ಭ್ರಷ್ಟಾಚಾರ ಮಾಡಿ ಆಸ್ತಿ ಸಂಪಾದನೆ ಮಾಡಿದ್ದಾರೆ, ಅಂಥವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಸಚಿವ ರಮೇಶ ಜಾರಕಿಹೊಳಿ . ಸಿ.ಪಿ.ಯೋಗೇಶ್ವರ್ ಸಂಪುಟ ಸೇರ್ಪಡೆ, ಸಚಿವ ರಮೇಶ ಜಾರಕಿಹೊಳಿ ಅವರ ವರ್ತನೆ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ.

ಸಿ.ಪಿ.ಯೋಗೇಶ್ವರ್ ಭ್ರಷ್ಟಾಚಾರ ಮಾಡಿ ಆಸ್ತಿ ಸಂಪಾದನೆ ಮಾಡಿದ್ದಾರೆ, ಅಂಥವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಸಚಿವ ರಮೇಶ ಜಾರಕಿಹೊಳಿ ಹೈಕಮಾಂಡ್ ನಂತೆ ವರ್ತಿಸುತ್ತಿದ್ದಾರೆ. ಸಿ.ಪಿ.ಯೋಗೇಶ್ವರ್ ೯ ಕೋಟಿ ರೂ. ಸಾಲ ಮಾಡಿದ್ದಾರೆ, ಮನೆ ಮಾರಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳುತ್ತಿದ್ದಾರೆ. ಯೋಗೇಶ್ವರ್ ಭ್ರಷ್ಟಾಚಾರದಿಂದ ಸಂಪಾದಿಸಿದ ಆಸ್ತಿಯದು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಸಿ.ಪಿ ಯೋಗೇಶ್ವರ್ ಕಾರಣರಲ್ಲ. ಬೇರೆ ಪಕ್ಷದವರು ಯೋಗೇಶ್ವರ ಮುಖ ನೋಡಿ ಬಿಜೆಪಿಗೆ ಬಂದಿಲ್ಲ ಎಂದು ವಾಗ್ದಾಳಿ ನಡೆಸಿದರು.

ನಾನು, ಸಿಎಂ ಯಡಿಯೂರಪ್ಪ ವಿರುದ್ಧವಾಗಲಿ, ಸಂಘಟನೆ ವಿರುದ್ಧವಾಗಲಿ ದೂರು ನೀಡಿಲ್ಲ. ಅರುಣ್‌ಸಿಂಗ್ ನನ್ನ ಅಭಿಪ್ರಾಯ ಆಲಿಸಿದ್ದಾರೆ. ರಾಜ್ಯದ ರಾಜಕೀಯ ವಿದ್ಯಮಾನಗಳಿಂದ ಅಸಮಾಧಾನಗೊಂಡಿರುವ ಶಾಸಕರು ಮುಂದಿನ ವಾರ ಸಭೆ ಸೇರಿ ಚರ್ಚೆ ನಡೆಸಲಿದ್ದೇವೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದರು.

ಒಟ್ಟಿನಲ್ಲಿ ಸಂಪುಟ ವಿಸ್ತರಣೆ ಅಸಮಾಧಾನ ದೆಹಲಿ ತಲುಪಿದೆ. ಗುಂಪುಗಾರಿಕೆ, ಸಾಕಷ್ಟು ಭಿನ್ನಮತ ಚಟುವಟಿಕೆಗಳಿಗೂ ಅವಕಾಶ ದೊರಕಿದೆ ಎಂಬ ಅಭಿಪ್ರಾಯಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

Tags:

error: Content is protected !!