hubbali

ಬೀದಿ ಬದಿ ವ್ಯಾಪಾರಸ್ಥರ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

Share

ಬೀದಿ ಬದಿ ವ್ಯಾಪಾರಸ್ಥರ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ಖಂಡಿಸಿ ವ್ಯಾಪಾರಸ್ಥರ ಸಂಘ ಹಾಗೂ ಸಮತಾಸೇನೆ ಸಂಘಟನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ ನಗರದ ಮಹಾನಗರ ಪಾಲಿಕೆ ಆಯುಕ್ತರ ಕಛೇರಿ ಎದುರುಗಡೆ ಪ್ರತಿಭಟನೆ ನಡೆಸಿದ ವ್ಯಾಪಾರಸ್ಥರ ಸಂಘ ಹಾಗೂ ಸಮತಾಸೇನೆ ಸಂಘಟನೆ ಕಾರ್ಯಕರ್ತರು, …ಕಳೆದ ಎಂಟು ತಿಂಗಳಿನಿಂದ ಕೊರೊನಾ ಹಿನ್ನೆಲೆ ಆರ್ಥಿಕ ಸಂಕಷ್ಟದ ನಡುವೆಯೂ ಬೀದಿ ಬದಿ ವ್ಯಾಪಾರಸ್ಥರ ದಿನಕ್ಕೆ ನೂರರಿಂದ ನಾಲ್ಕು ನೂರು ರೂಪಾಯಿ ದುಡಿದು ಬದುಕುತ್ತಿದ್ದಾರೆ. ಆದರೇ ಪಾಲಿಕೆ ಅಧಿಕಾರಿಗಳು ಯಾವುದೇ ನೋಟೀಸ್ ನೀಡದೇ ವ್ಯಾಪಾರಸ್ಥರು ಅಂಗಡಿಗಳನ್ನು ತೆರವುಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಭಟನೆ ನಿರತ ಗುರುನಾಥ ಉಳ್ಳಿಕಾಶಿ ಮಾತನಾಡಿ, ಪಾಲಿಕೆ ಅಧಿಕಾರಿಗಳು ಯಾವುದೇ ನೋಟೀಸ್ ನೀಡದೇ ವ್ಯಾಪಾರಸ್ಥರು ಅಂಗಡಿಗಳನ್ನು ತೆರವುಗೊಳಿಸಿದ್ದಾರೆ.ವ್ಯಾಪಾರಕ್ಕೆ ಸ್ಥಳಾವಕಾಶ ನೀಡಿಲ್ಲ. ನಮ್ಮ ಸಾಮಗ್ರಿಗಳನ್ನು ವಶಕ್ಕೆ ಪಡೆದು ನಾಶ ಮಾಡುತ್ತಿದ್ದಾರೆ,ನಮ್ಮ ವಸ್ತುಗಳಿಗೆ ಬೇಕಾಬಿಟ್ಟಿ ದಂಡ ವಿಧಿಸುತ್ತಿದ್ದಾರೆ ಎಂದು ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಬೀದಿ ಬದಿ ವ್ಯಾಪಾರಸ್ಥರಿಗೆ ಕಿರುಕುಳ ನೀಡುತ್ತಿರುವ ಪಾಲಿಕೆ ಅಧಿಕಾರಿಯನ್ನು ವಜಾಗೊಳಿಸಿ ಕೂಡಲೇ ವ್ಯಾಪಾರಸ್ಥರು ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು.

Tags:

error: Content is protected !!