Belagavi

ಬೆಳಗಾವಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತಿ: ಶಿಲ್ಪಕಲಾ ಸಾಧಕನ ಸ್ಮರಿಸಿ ಗೌರವ ಸಮರ್ಪಣೆ

Share

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

: ಬೆಳಗಾವಿ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ವಿಶ್ವಕರ್ಮ ಅಭಿವೃದ್ದಿ ನಿಗಮ ಮಾಜಿ ಅಧ್ಯಕ್ಷ ಆರ್.ಶ್ರೀನಿವಾಸ್ ಆಚಾರ್ಯ ಉದ್ಘಾಟಿಸಿದರು.

ಈ ವೇಳೆ ವಿಶ್ವಕರ್ಮ ಅಭಿವೃದ್ದಿ ನಿಗಮ ಮಾಜಿ ಅಧ್ಯಕ್ಷ ಆರ್.ಶ್ರೀನಿವಾಸ್ ಆಚಾರ್ಯ ಮಾತನಾಡಿ, ನಾಡು, ನುಡಿ, ಸಂಸ್ಕøತಿ, ಪರಂಪರೆಗೆ ಗಮನಾರ್ಹ ಕೊಡುಗೆ ನೀಡಿದ ಮಹನೀಯರ ಸ್ಮರಣೆ ನಮಗೆಲ್ಲ ಪ್ರೇರಣೆ ನೀಡುವಂಥದು. ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಕರ್ನಾಟಕ ರಾಜ್ಯ ಸರ್ಕಾರವೇ ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಸತ್ಯನಾರಾಯಣ ಭಟ್ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಅಧಿಕಾರಿಗಳು, ಸಿಬ್ಬಂದಿ, ವಿಶ್ವಕರ್ಮ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Tags:

error: Content is protected !!