Belagavi

ಬೆಳಗಾವಿಯಲ್ಲಿ ಜನವರಿ 17ರಂದು ಜನಸೇವಕ ಸಮಾವೇಶ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ: ಎಂಎಲ್‍ಸಿ ಮಹಾಂತೇಶ ಕವಟಗಿಮಠ

Share

ಬೆಳಗಾವಿಯಲ್ಲಿ ಜನವರಿ 17ರಂದು ನಡೆಯಲಿರುವ ಗ್ರಾಮ ಪಂಚಾಯಿತಿ ಸದಸ್ಯರ ಜನಸೇವಕ ಸಮಾವೇಶದಲ್ಲಿ ಬಿಜೆಪಿ ವರಿಷ್ಠ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ತಿಳಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಬೆಂಬಲಿತ ಸದಸ್ಯರು ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಅವರ ಮಾರ್ಗದರ್ಶನದಲ್ಲಿ ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನೆ ಸಮಾರಂಭ ಏರ್ಪಡಿಸಲಾಗಿದೆ. ಬೆಳಗಾವಿಯಲ್ಲಿ ಜನವರಿ 17ರಂದು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಬೃಹತ್ ಜನಸೇವಕ ಸಮಾವೇಶ ನಡೆಯಲಿದೆ. ಜನವರಿ 17ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಬಿಜೆಪಿ ವರಿಷ್ಠ, ಕೇಂದ್ರ ಗೃಹ ಸಚಿವ ಅಮೀತ್ ಶಾ ಬೆಳಗಾವಿಯಲ್ಲಿ ಆಯೋಜಿಸಿರುವ ಜನಸೇವಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಾರ್ವಜನಿಕ ಸಭೆಯಲ್ಲೂ ಶಾ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಒಟ್ಟಿನಲ್ಲಿ ಕೇಂದ್ರ ಗೃಹ ಸಚಿವ, ಬಿಜೆಪಿ ವರಿಷ್ಠ ಅಮಿತ್ ಶಾ ರಾಜ್ಯಕ್ಕೆ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದು, ಬೆಳಗಾವಿಯ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ, ಸಾರ್ವಜನಿಕ ಸಮಾರಂಭದಲ್ಲೂ ಮಾತನಾಡಲಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾಹಿತಿ ನೀಡಿದರು.

 

 

Tags:

error: Content is protected !!