ಬೆಳಗಾವಿ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ವಿವಿಧ ಪ್ರದೇಶಗಳ ಮನೆಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಖುದ್ದಾಗಿ ಭೇಟಿ ನೀಡಿ, ಮತದಾರರ ಪಟ್ಟಿಯನ್ನು ಪರಿಶೀಲಿಸಿದರು.
: ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಂಗಳವಾರ ಬೆಳಗಾವಿ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ವಿವಿಧ ಪ್ರದೇಶಗಳ ಮನೆಗಳಿಗೆ ಅಧಿಕಾರಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿದರು.
ಪ್ರತಿ ಮನೆಯಲ್ಲಿ ವಿಚಾರಣೆ ನಡೆಸಿ ಮತದಾರರ ಪಟ್ಟಿಯನ್ನು ಪರಿಶೀಲಿಸಿದರು. ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.