Belagavi

ಬೆಳಗಾವಿ ಗ್ರಾಮೀಣದಲ್ಲಿ ಗಾ.ಪಂ. ನೂತನ ಸದಸ್ಯರಿಗೆ ಸತ್ಕಾರ, ಸ್ನೇಹ ಭೋಜನ: ಚರ್ಚೆಗೆ ಗ್ರಾಸವಾದ ಬಿಜೆಪಿ ಹೊಸ ದಾಳ

Share

ಬೆಳಗಾವಿಯ ಗ್ರಾಮೀಣ ಕ್ಷೇತ್ರದಲ್ಲಿ ಲಂಚ್ ಫಾಲಿಟಿಕ್ಸ್ ಮೂಲಕ ಶಾಸಕಿ ಹೆಬ್ಬಾಳ್ಕರ್‍ಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಪಂಚ್ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾವಗೆ ಕ್ರಾಸ್ ಬಳಿ ಚಲೋ ಗಣೇಶ್ ಬಾಗ್ ಹೆಸರಿನಲ್ಲಿ ಗ್ರಾಮ ಪಂಚಾಯತಿ ನೂತನ ಸದಸ್ಯರಿಗೆ ಸತ್ಕಾರ ಮತ್ತು ಸ್ನೇಹ ಭೋಜನ ಕೂಟ ಕಾರ್ಯಕ್ರಮ ಆಯೋಜಿಸಲಾಗಿದೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರನ್ನು ಬಿಜೆಪಿ ಜೊತೆ ಕರೆದೊಯ್ಯಲು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸಂಪೂರ್ಣ ಯೋಜನೆ ಸಿದ್ಧ ಮಾಡಿಕೊಂಡಿದ್ದಾರೆ. ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾವಗೆ ಕ್ರಾಸ್ ಬಳಿಯ ಇರುವ ಗಣೇಶ್ ಬಾಗ್‍ದಲ್ಲಿ ಗ್ರಾಮ ಪಂಚಾಯತಿ ನೂತನ ಸದಸ್ಯರಿಗೆ ಸತ್ಕಾರ ಮತ್ತು ಸ್ನೇಹ ಭೋಜನ ಕೂಟ ಏರ್ಪಡಿಸಿದ್ದಾರೆ. ಬಿಜೆಪಿಯ ಯುವ ಮುಖಂಡ ಧನಂಜಯ ಜಾಧವ ಭೋಜನಕೂಟದ ಉಸ್ತುವಾರಿ ವಹಿಸಿದ್ದಾರೆ.

ಈ ವೇಳೆ ಶಾಸಕ ಅನಿಲ ಬೆನಕೆ ಮಾತನಾಡಿ, ಈ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ವೇಳೆ ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಮಂದಿರ ನಿರ್ಮಾಣ ಕನಸು ನನಸಾಗಿದೆ. ಕಳೆದ 24 ವರ್ಷಗಳಿಂದ ಬೆಳಗಾವಿ ಗ್ರಾಮೀಣ ಭಾಗದಲ್ಲಿ ಧನಂಜಯ ಜಾಧವ್ ಅವರು ಹಿಂದೂ ರಾಷ್ಟ್ರ ನಿರ್ಮಾಣ ಸಾಕಾರಗೊಳಿಸಲು ಎಡೆಬಿಡದೇ ಕಾರ್ಯ ಮಾಡಿದ್ದಾರೆ. ಬರುವ ದಿನಗಳಲ್ಲಿ ಹಿಂದೂ ರಾಷ್ಟ್ರ ನಿರ್ಮಾಣದ ಕನಸು ನನಸು ಮಾಡಲು ಎಲ್ಲರೂ ಕೈ ಜೋಡಿಸಬೇಕು. ಬೆಳಗಾವಿ ಜಿಲ್ಲೆ ಮತ್ತು ಗ್ರಾಮೀಣ ಕ್ಷೇತ್ರದಲ್ಲಿ ಹಿಂದೂ ರಾಷ್ಟ್ರ ಸಂಕಲ್ಪದ ಬೀಜ ಮೊಳೆದು ಹೆಮ್ಮರವಾಗಬೇಕು ಎಂದರು.

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ಅನಿಲ್ ಬೆನಕೆ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಧನಂಜಯ ಜಾಧವ್, ಮಾಜಿ ಶಾಸಕ ಸಂಜಯ ಪಾಟೀಲ, ಪ್ರಮೋದ ಕಚೋರಿ, ನಾಗರಾಜ ಪಾಟೀಲ, ಮಾಜಿ ಶಾಸಕ ಮನೋಹರ ಕಡೋಲ್ಕರ್, ವಿಶ್ವನಾಥ ಪಾಟೀಲ, ಪ್ರವೀಣ ಕರೋಶಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಭೋಜನ ಕೂಟ ತೀವ್ರ ಕುತೂಹಲ ಮೂಡಿಸಿದೆ.

Tags:

error: Content is protected !!