ಬೆಳಗಾವಿ ಗ್ರಾಮೀಣ ಕ್ಷೇತ್ರ ನಂದು, ನಾನು ತಯಾರು ಮಾಡಿದ ಕ್ಷೇತ್ರ ಅದು. ಅಲ್ಲಿ ಯಾರೇ ಗೆದ್ದಿರಬಹುದು. ಆದ್ರೆ ಕ್ಷೇತ್ರಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ. ಅಲ್ಲಿ ಎಲ್ಲ ರೀತಿಯ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‍ಗೆ ತಿರುಗೇಟು ಕೊಟ್ಟಿದ್ದಾರೆ.
ಬೆಳಗಾವಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ ಜಾರಕಿಹೊಳಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಗ್ರಾಮೀಣ ಕ್ಷೇತ್ರದಲ್ಲಿ ಒಂದು ಕೆರೆ ಕ್ಯಾನ್ಸಲ್ ಆಗಿತ್ತು. ಅದಕ್ಕೆ ಪರ್ಯಾಯವಾಗಿ ಮತ್ತೊಂದು ಕೆರೆ ಕಟ್ಟಿ ಕೊಡುವ ವ್ಯವಸ್ಥೆ ಮಾಡುತ್ತಿದ್ದೇನೆ ಎಂದು ಹೇಳುವ ಸಂದರ್ಭದಲ್ಲಿ ಗ್ರಾಮೀಣ ಕ್ಷೇತ್ರ ನಂದು, ನಾನು ತಯಾರು ಮಾಡಿದ ಕ್ಷೇತ್ರವದು ಎಂದು ಹೇಳಿದರು.
ಗ್ರಾಮೀಣ ಕ್ಷೇತ್ರದಲ್ಲಿ ನೀವು ಸ್ಪರ್ಧಿಸುತ್ತಿದ್ದಿರಾ ಎಂಬ ಪ್ರಶ್ನೆಗೆ ಇದೇ ವೇಳೆ ಪ್ರತಿಕ್ರಯಿಸಿದ ರಮೇಶ ಜಾರಕಿಹೊಳಿ ನಾನು ಗೋಕಾಕ್ ಕ್ಷೇತ್ರವನ್ನು ಎಂದೂ ಬಿಡುವುದಿಲ್ಲ. ಗ್ರಾಮೀಣದಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುವುದು ನನ್ನ ಉದ್ದೇಶವಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್‍ಗೆ ಬಹಿರಂಗ ಸವಾಲು ಹಾಕಿದರು. ಇನ್ನು ಗ್ರಾಮೀಣ ಕ್ಷೇತ್ರವನ್ನು ಗೋಕಾಕ್ ಅರಭಾಂವಿ ಕ್ಷೇತ್ರದಂತೆ ಸಂಘಟನೆ ಮತ್ತು ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದರು.
ಗ್ರಾಮೀಣ ಕ್ಷೇತ್ರದಲ್ಲಿ ಸರ್ಕಾರಿ ಕೆಲಸದ ಸಂಬಂಧ ನಮಗೆ ಏನೂ ಹೇಳುತ್ತಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ ವಿಚಾರಕ್ಕೆ ತಿರುಗೇಟು ನೀಡಿದ ರಮೇಶ ಜಾರಕಿಹೊಳಿ ಹತಾಸೆಯಿಂದ ಆರೋಪ ಮಾಡುತ್ತಿದ್ದಾರೆ. ಹತಾಸೆಯಾಗಿ ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಒಟ್ಟಾರೆ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಓರ್ವ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಸೋಲಿಸುತ್ತೇನೆ ಎಂದು ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್‍ಗೆ ರಮೇಶ ಜಾರಕಿಹೊಳಿ ಸವಾಲು ಹಾಕಿದ್ದು. ಇದಕ್ಕೆಲ್ಲಾ ಲಕ್ಷ್ಮೀ ಹೆಬ್ಬಾಳ್ಕರ್ ಯಾವ ರೀತಿ ಪ್ರತಿ ಸವಾಲು ಹಾಕುತ್ತಾರೆ ಎಂದು ಕಾಯ್ದು ನೋಡಬೇಕಿದೆ.