Belagavi

ಬೆಳಗಾವಿ ಜಿಲ್ಲೆಯ 12 ಶಿಕ್ಷಕರಿಗೆ ಕೋವಿಡ್ ದೃಢ: ಪಾಲಕರು, ಪೋಷಕರಲ್ಲಿ ಶುರುವಾಯ್ತು ಆತಂಕ

Share

ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತೆ ಕ್ರಮಗಳ ಜೊತೆಗೆ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅನುಮತಿ ನೀಡಿದೆ. ಹಲವು ಜಿಲ್ಲೆಗಳಲ್ಲಿ ಶಿಕ್ಷಕರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ 12 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿಗಳು, ಪೆÇೀಷಕರಲ್ಲಿ ಆತಂಕ ಶುರುವಾಗಿದೆ.

ರಾಜ್ಯದಲ್ಲಿ 10 ಮತ್ತು 12ನೇ ತರಗತಿ ಸೇರಿ ಉನ್ನತ ಹಂತದ ತರಗತಿಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಶಿಕ್ಷಣ ಸಂಸ್ಥೆಗಳಿಗೆ ಹಾಜರಾಗುವ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಈ ನಡುವೆ ಹಲವು ಜಿಲ್ಲೆಗಳಲ್ಲಿ ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಎಡೆಮಾಡಿದೆ. ಬೆಳಗಾವಿ ಜಿಲ್ಲೆಯಲ್ಲಿ 12 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಬೆಳಗಾವಿ ತಾಲೂಕಿನ ಕಡೋಲಿ ಸರ್ಕಾರಿ ಶಾಲೆಯ ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬಾಗಿಲು ತೆರೆದು ಮೂರು ದಿನಗಳೊಳಗೆ ಶಾಲೆಯನ್ನು ಬಂದ್ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಶಿಕ್ಷಕರ ಕೋವಿಡ್ ಟೆಸ್ಟ್‍ಗೆ ಸೂಚಿಸಲಾಗಿದೆ. ಇಲ್ಲಿಯವರೆಗೆ 5150 ಶಿಕ್ಷಕರ ಕೋವಿಡ್ ಟೆಸ್ಟ್ ಆಗಿದ್ದು, 2 ಸಾವಿರ ಶಿಕ್ಷಕರಲ್ಲಿ ಸೋಂಕು ಇಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇನ್ನು ಟೆಸ್ಟ್ ವರದಿ ಬರುವ ಮುಂಚೆಯೇ ಹಲವೆಡೆ ಶಿಕ್ಷಕರು ತರಗತಿಗಳಿಗೆ ಹಾಜರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಇನ್ನೂ 3 ಸಾವಿರ ಶಿಕ್ಷಕರ ಕೋವಿಡ್ ಟೆಸ್ಟ್ ವರದಿ ಪ್ರಕಟಗೊಳ್ಳುವುದು ಬಾಕಿ ಇದೆ.

Tags:

error: Content is protected !!