Belagavi

ಬೆಳಗಾವಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ: ಕಾಮಗಾರಿಗಳ ವಿಳಂಬ, ಬುಡಾ ಭೂ ಸ್ವಾಧೀನ, ಕನ್ನಡ ಧ್ವಜ ವಿವಾದ ಚರ್ಚೆ

Share

ಬೆಳಗಾವಿ ತಾಲೂಕು ಪಂಚಾಯಿತಿಯಲ್ಲಿ ಸಾಮಾನ್ಯ ಸಭೆ ನಡೆಯಿತು. ಅಭಿವೃದ್ಧಿ ಕಾಮಗಾರಿಗಳ ನಿಧಾನ ಗತಿ, ಬುಡಾದಿಂದ ರೈತರಿಗೆ ಮಾಹಿತಿ ನೀಡದೇ ಭೂ ಸ್ವಾಧೀನ, ಪಾಲಿಕೆ ಆವರಣದಲ್ಲಿ ಕನ್ನಡ ಧ್ವಜ ಹಾರಿಸಿದ ವಿವಾದ, ಕಡೋಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಟ್ಟಿಯಿಂದ ಮತದಾರರ ಹೆಸರು ಬಿಟ್ಟು ಹೋಗಿರುವುದು ಮತ್ತಿತರ ವಿಷಯಗಳು ಪ್ರಸ್ತಾಪವಾದವು. ಅಧ್ಯಕ್ಷ ಶಂಕರಗೌಡ ಪಾಟೀಲ ಸದಸ್ಯರ ಪ್ರಶ್ನೆಗಳಿಗೆ ಸಮಜಾಯಿಷಿ ನೀಡಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಸಾಮಾನ್ಯ ಸಭೆ ನಡೆಯಿತು. ತಾಲೂಕು ಪಂಚಾಯಿತಿ ಅಧ್ಯಕ್ಷ ಶಂಕರಗೌಡ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಸದಸ್ಯರು ಪ್ರಸ್ತಾಪಿಸಿದರು.
ಅಭಿವೃದ್ಧಿ ಕಾಮಗಾರಿಗಳು ನಿಧಾನವಾಗಿ ನಡೆದಿವೆ. ಎಂಜಿನೀಯರ್‍ಗಳು ಲಕ್ಷ್ಯ ವಹಿಸುತ್ತಿಲ್ಲ. ಮಾತು ಕೇಳುತ್ತಿಲ್ಲ ಎಂದು ಸದಸ್ಯರು ದೂರಿದರು. ತಾಲೂಕು ಪಂಚಾಯಿತಿ ಅಧ್ಯಕ್ಷ ಶಂಕರಗೌಡ ಪಾಟೀಲ ಸದಸ್ಯರನ್ನು ಸಮಾಧಾನಪಡಿಸಿ ಎಂಜಿನೀರ್‍ಗಳಿಗೆ ಸೂಚನೆ ನೀಡಿದರು.

ತಾಲೂಕು ಪಂಚಾಯಿತಿ ಸದಸ್ಯ ಮಾತನಾಡಿ, ಗ್ರಾಮ ವ್ಯಾಪ್ತಿಯ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಬುಡಾ ಪ್ರಾಧಿಕಾರ ರೈತರಿಗೆ ನೋಟಿಸ್ ನೀಡುತ್ತಿದೆ ಎಂದು ದೂರಿದರು.
ಈ ಸಂದರ್ಭ ತಾಲೂಕು ಪಂಚಾಯಿತಿ ಅಧ್ಯಕ್ಷ ಶಂಕರಗೌಡ ಪಾಟೀಲ ಮಾತನಾಡಿ, ಈಗಾಗಲೇ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಏನು ಮಾಡಬೇಕೆಂಬುದನ್ನು ಅಧಿಕಾರಿಗಳ ಅಭಿಪ್ರಾಯ ಪಡೆದು ಕ್ರಮ ಜರುಗಿಸಲಾಗುವುದು ಎಂದರು.

ಪಾಲಿಕೆ ಆವರಣದಲ್ಲಿ ಕನ್ನಡ ಧ್ವಜ ಹಾರಿಸಿದ್ದನ್ನು ಎಂಇಎಸ್ ಪ್ರತಿನಿಧಿಯೂ ಆಗಿರುವ ತಾಲೂಕು ಪಂಚಾಯಿತಿ ಸದಸ್ಯ ಖಂಡಿಸಿ, ಭಗವಾ ಧ್ವಜ ಹಾರಿಸಲು ಅವಕಾಶ ನೀಡಬೇಕೆಂದು ಕೋರಿದರು.
ಅಧ್ಯಕ್ಷ ಶಂಕರಗೌಡ ಪಾಟೀಲ, ಅಧಿಕಾರಿಗಳ ತಪ್ಪಿನಿಂದ ಇದೆಲ್ಲ ಆಗಿದೆ. ಮರಾಠಿ ಮತ್ತು ಕನ್ನಡ ಭಾಷಿಕರು ಎಲ್ಲ ಅಭಿವೃದ್ಧಿ ಕೆಲಸಗಳಲ್ಲಿ ಒಂದಾಗಿ ಇದ್ದೇವೆ. ಭೇದ ಭಾವ ಯಾವಾಗಲೂ ಇರಲಿಲ್ಲ. ಈಗಲೂ ಬೇಡ ಎಂದು ಸಮಾಧಾನಪಡಿಸಿದರು.

ಕಡೋಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಟ್ಟಿಯಿಂದ ಮತದಾರರ ಹೆಸರು ಬಿಟ್ಟು ಹೋಗಿವೆ. ಇದಕ್ಕೆ ಅಧಿಕಾರಿಗಳೇ ಜವಾಬ್ದಾರಿಯಾಗಿದ್ದಾರೆ. ಬೆಳಗಾವಿ ಲೋಕಸಭೆ ಉಪಚುನಾವಣೆ ಸೇರಿ ಹಲವು ಚುನಾವಣೆಗಳು ಎದುರಾಗುತ್ತಿದ್ದು, ಈ ಲೋಪವನ್ನು ಸರಿಪಡಿಸಿಕೊಳ್ಳಬೇಕು ಎಂದರು.
ಒಟ್ಟಿನಲ್ಲಿ ಬೆಳಗಾವಿ ತಾಲೂಕು ಪಂಚಾಯಿತಿ ಸಭೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಚರ್ಚೆಯ ಜೊತೆಗೆ ಗ್ರಾಮದ ಸಮಸ್ಯೆಗಳು, ಧ್ವಜ ವಿವಾದವೂ ಪ್ರಸ್ತಾಪವಾಯಿತು.

 

Tags:

error: Content is protected !!