Uncategorized

ಬೆಳಗಾವಿ ಪ್ರಜ್ವಲ ಸೇವಾ ಸಂಸ್ಥೆಯಿAದ ವಡ್ಡರವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Share

ಬೆಳಗಾವಿ ಶಿವಬಸವ ನಗರದ ವಡ್ಡರವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಪ್ರಜ್ವಲ ಸೇವಾ ಸಂಸ್ಥೆ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ೨೧೪ ಜನರು ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.


ವೈ.ಓ: ಬೆಳಗಾವಿ ಪ್ರಜ್ವಲ ಸೇವಾ ಸಂಸ್ಥೆ, ಕರ್ನಾಟಕ ನಗರ ಮತ್ತು ಗ್ರಾಮಾಭ್ಯುದಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ಸಾತಾರಾದ ಸ್ವಯಂ ಸಾಮಾಜಿಕ ವಿಕಾಸ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ಶಿವಬಸವ ನಗರದ ವಡ್ಡರವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು. ಕೆಎಲ್‌ಇ ಡಾ.ಪ್ರಭಾಕರ ಕೋರೆ ಚಾರಿಟೆಬಲ್ ಆಸ್ಪತ್ರೆ ವೈದ್ಯರ ತಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡರು.

ಕೆಎಲ್‌ಇ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ತಂಡದವರು ರಕ್ತದೊತ್ತಡ, ಸಕ್ಕರೆ ಕಾಯಿಲೆ, ಆಮ್ಲಜನಕರ ಮಟ್ಟ ಪರೀಕ್ಷೆ, ರಕ್ತ ತಪಾಸಣೆ, ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆಯನ್ನು ಉಚಿತವಾಗಿ ಮಾಡಿದರು. ೨೧೪ ಜನರು ಉಚಿತ ಆರೋಗ್ಯ ತಪಾಸಣೆ ಶಿಬಿರದ ಪ್ರಯೋಜನ ಪಡೆದುಕೊಂಡರು. ಕೊರೋನಾ ಸೋಂಕು ತಡೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ತಿಳಿವಳಿಕೆ ಮೂಡಿಸಿದರು.

Tags:

error: Content is protected !!