Chikkodi

ಬೆಳಗಾವಿ ಬಗ್ಗೆ ಮಾತನಾಡುವ ಅಧಿಕಾರ ಉದ್ಧವ್ ಠಾಕ್ರೆಗಿಲ್ಲ..ಸಚಿವೆ ಶಶಿಕಲಾ ಜೊಲ್ಲೆ ಖಡಕ್ ಉತ್ತರ

Share

ಬೆಳಗಾವಿ ಬಗ್ಗೆ ಮಾತನಾಡುವ ಅಧಿಕಾರ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಇಲ್ಲ. ಠಾಕ್ರೆಯ ಮೂರ್ಖತನದ ಹೇಳಿಕೆಯನ್ನು ನಾನು ಖಂಡಿಸುತ್ತೆನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಖಾರವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಪ್ಪಾಣಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಗಡಿಭಾಗದಲ್ಲಿ ಕನ್ನಡಿಗರು-ಮರಾಠಿಗರು ಅನ್ಯೂನ್ಯವಾಗಿ, ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕುತ್ತಿದ್ದಾರೆ. ಆದರೆ ಉದ್ಧವ್ ಠಾಕ್ರೆಯವರ ಮೂರ್ಖತನದ ಹೇಳಿಕೆಯು ಗಡಿಭಾಗದಲ್ಲಿ ಕನ್ನಡಿಗರು ಹಾಗೂ ಮರಾಠಿಗರ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಆದರೆ ಬೆಳಗಾವಿಯು ಕರ್ನಾಟಕದ ಒಂದು ಅವಿಭಾಜ್ಯ ಬೆಳಗಾವಿ ಗಡಿ ವಿಚಾರದಲ್ಲಿ ಮಹಾಜನ್ ವರದಿ ಅಂತಿಮವಾಗಿದೆ. ಇನ್ನು ಬೆಳಗಾವಿ ಗಡಿ ಬಗ್ಗೆ ಪದೇ ಪದೇ ವಿವಾದಾತ್ಮಕ ಹೇಳಿಕೆಯನ್ನು ನೀಡುತ್ತಿರುವುದು ಅವರಿಗೆ ಶೋಭೆ ತರಲ್ಲ. ಬೆಳಗಾವಿ ಬಗ್ಗೆ ಮಾತನಾಡುವ ಅಧಿಕಾರ ಉದ್ಧವ್ ಠಾಕ್ರೆಗೆ ಇಲ್ಲ ಎಂದು ತಮ್ಮ ಆಕ್ರೋಶ ಹೊರ ಹಾಕಿದರು.

ಒಟ್ಟಾರೆ ಗಡಿ ತಾಲೂಕು ನಿಪ್ಪಾಣಿ ಶಾಸಕಿ, ಸಚಿವೆ ಶಶಿಕಲಾ ಜೊಲ್ಲೆ ಮಹಾ ಸಿಎಂ ಉದ್ಧವ್ ಠಾಕ್ರೆಗೆ ತಕ್ಕ ಉತ್ತರವನ್ನೆ ನೀಡಿದ್ದಾರೆ.

 

Tags:

error: Content is protected !!