Banglore

ಬೆಳಗಾವಿ ಬೈಎಲೆಕ್ಷನ್‍ನಲ್ಲಿ ಯಾರು ಯಾರನ್ನೂ ಹರಕೆಯೆ ಕುರಿ ಮಾಡ್ತಿಲ್ಲ..ಸತೀಶ ಜಾರಕಿಹೊಳಿ..!

Share

ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಅನಿಲ್ ಲಾಡ್, ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ನನ್ನ ಹೆಸರು ಕೇಳಿ ಬಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸತೀಶ ಜಾರಕಿಹೊಳಿ ಜ.11ಕ್ಕೆ ಹುಬ್ಬಳ್ಳಿಯಲ್ಲಿ ವಿಭಾಗ ಮಟ್ಟದ ಸಭೆಯಲ್ಲಿ ಬೆಳಗಾವಿ ಲೋಕಸಭೆ ಚುನಾವಣೆಗ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದಾದ ಬಳಿಕ ಹೈಕಮಾಂಡ್ ಅಭ್ಯರ್ಥಿ ಫೈನಲ್ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ನಿಮ್ಮ ಹೆಸರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳುವುದು..ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ನೀವು ಹೇಳುವುದಿರಂದ ಯಾರು ಯಾರನ್ನು ಹರಕೆಯ ಕುರಿ ಮಾಡುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸತೀಶ ಜಾರಕಿಹೊಳಿ ಇಲ್ಲಿ ಯಾರೂ ಯಾರನ್ನೂ ಹರಕೆಯ ಕುರಿ ಮಾಡುತ್ತಿಲ್ಲ. ಎಲ್ಲರೂ ಕಾರ್ಯಕರ್ತರ ಅಭಿಪ್ರಾಯ ತಿಳಿಸಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ನಮ್ಮದೇ ಆದ ವೋಟ್ ಬ್ಯಾಂಕ್ ಇದೆ. 4 ಲಕ್ಷಕ್ಕಿಂತಗೂ ಹೆಚ್ಚು ಮತಗಳನ್ನು ಪಡೆದಿದ್ದೇವೆ ಇನ್ನು ಹೆಚ್ಚು ಮತಗಳನ್ನು ಪಡೆಯುವ ಶಕ್ತಿ ನಮಗಿದೆ ಎಂದು ಹೇಳಿದರು.

 

Tags:

error: Content is protected !!