ಎರಡು ದಿನಗಳ ಬೆಳಗಾವಿ ಪ್ರವಾಸದಲ್ಲಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಬಿಜೆಪಿ ಮಹಾನಗರ ಜಿಲ್ಲಾ ಕಚೇರಿಗೆ ಭೇಟಿ ನೀಡಿದರು.
ಗುರುವಾರ ಬೆಳಗಾವಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಬಳಿಕ ಸಾಯಂಕಾಲ ಸದಾಶಿವನಗರದಲ್ಲಿರುವ ಬಿಜೆಪಿ ಮಹಾನಗರ ಜಿಲ್ಲಾ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ಜಿಲ್ಲೆಯ ಬಿಜೆಪಿ ಪದಾಧಿಕಾರಿಗಳು ಆತ್ಮೀಯವಾಗಿ ಬಸವರಾಜ್ರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಹಾನಗರ ಜಿಲ್ಲಾ ಅಧ್ಯಕ್ಷ ಶಶಿಕಾಂತ ಪಾಟೀಲ, ದಕ್ಷಿಣ ಶಾಸಕ ಅಭಯ ಪಾಟೀಲ, ಮಹಾನಗರ ಪ್ರಭಾರಿ ರಮೇಶ ದೇಶಪಾಂಡೆ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.