ಬೆಳಗಾವಿ ಶಾಹು ನಗರ ಸಮನ್ವಯ ಅಂಧರ ಸಂಸ್ಥೆಯಲ್ಲಿ ಸ್ವಾಮಿ ವಿವೇಕಾನಂದರ 158ನೇ ಜಯಂತಿ ಆಚರಿಸಲಾಯಿತು.
ಬೆಳಗಾವಿ ಶಾಹುನಗರದ ಸಮನ್ವಯ ಅಂಧರ ಸಂಸ್ಥೆಯಲ್ಲಿ ಮಂಗಳವಾರ ಸ್ವಾಮಿ ವಿವೇಕಾನಂದರ 158ನೇ ಜಯಂತಿ ಕಾರ್ಯಕ್ರಮ ನಡೆಯಿತು. ಸಮನ್ವಯ ಸಂಸ್ಥೆಯ ಸದಸ್ಯೆ ವಿದ್ಯಾವತಿ ಪುಣೇಕರ್ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಹನುಮಂತ್ ಲಕ್ಕಪ್ಪ ಹವನ್ನವರ್, ಕರ್ನಾಟಕ ಸೊಸೈಟಿ ಕಾರ್ಯದರ್ಶಿ ಬಾಳೇಶ್ ತೇರದಾಳ ಮುಖ್ಯ ಅತಿಥಿಗಳಾಗಿದ್ದರು. ಮಹೇಶ್ವರಿ ಅಂಧ ಮಕ್ಕಳ ಶಾಲೆಯ ನಿವೃತ್ತ ಶಿಕ್ಷಕ ಶಿವಾನಂದ್ ರಾಹುಲ್, ಸಂಸ್ಥೆಯ ಕಾರ್ಯದರ್ಶಿ ಶಿವನಗೌಡ ಪಾಟೀಲ, ಸಾವಿತ್ರಿ ಮರ್ಜಿ ಉಪಸ್ಥಿತರಿದ್ದರು.
ವಿಶ್ವದಲ್ಲಿ ಭಾರತೀಯ ಸಂಸ್ಕøತಿಯ ಕಂಪನ್ನು ಪಸರಿಸಿ ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಸ್ವಾಮಿ ವಿವೇಕಾನಂದರು ದೇಶ ಕಂಡ ಅಪರೂಪದ ಸಂತರಾಗಿದ್ದಾರೆ. ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಚಾರ ಎಂದು ಗಣ್ಯರು ಪ್ರಶಂಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅಂಧ ಮಕ್ಕಳಿಂದ ದೇಶ ಭಕ್ತಿ ಗೀತೆಗಳ ಗಾಯನ ನಡೆಯಿತು.
ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.