ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಅತ್ಯಂತ ಆದರದಿಂದ ಬರಮಾಡಿಕೊಳ್ಳಲಾಯಿತು.
ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 11.32ಕ್ಕೆ ಆಗಮಿಸಿದರು. ಈ ವೇಳೆ ಅಮಿತ್ ಶಾರನ್ನು ಡಿಸಿಎಂ ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್, ಸಚಿವರಾದ ಬಸವರಾಜ್ ಬೊಮ್ಮಾಯಿ, ರಮೇಶ ಜಾರಕಿಹೊಳಿ, ಶಾಸಕರಾದ ಮಹೇಶ ಕುಮಠಳ್ಳಿ, ಅಭಯ ಪಾಟೀಲ, ಅನಿಲ್ ಬೆನಕೆ, ಮಹದೇವಪ್ಪ ಯಾದವಾಡ ಸ್ವಾಗತ ಕೋರಿದರು.
ನಂತರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಸೇನಾ ಹೆಲಿಕಾಪ್ಟರ್ ಮೂಲಕ ಕೇಂದ್ರ ಸಚಿವ ಅಮಿತ್ ಷಾ ಬಾಗಕೋಟೆಯಲ್ಲಿ ನಡೆಯಲಿರು ಕಾರ್ಯಕ್ರಮಕ್ಕೆ ಪ್ರಯಾಣ ಬೆಳೆಸಿದರು. ಈ ವೇಳೆ ಅಮಿತ್ ಷಾಗೆ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕೂಡ ಸಾಥ್ ನೀಡಿದರು.