ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಘಟಕದಲ್ಲಿ ನಿರ್ಮಿಸಿರುವ ಮಹಿಳಾ ಮತ್ತು ಪುರುಷ ಸಿಬ್ಬಂದಿಗಳ ವಿಶ್ರಾಂತಿ ಗೃಹವನ್ನು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಘಟಕ 3ರಲ್ಲಿ ಮಹಿಳಾ ಮತ್ತು ಪುರುಷ ಸಿಬ್ಬಂದಿಗಳ ವಿಶ್ರಾಂತಿ ಗೃಹವನ್ನು ಹೊಸದಾಗಿ ನಿರ್ಮಿಸಲಾಗಿದೆ. ಈ ವಿಶ್ರಾಂತಿ ಗೃಹ ಕಟ್ಟಡವನ್ನು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಶುಕ್ರವಾರ ಉದ್ಘಾಟಿಸಿದರು.
ಈ ವೇಳೆ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಸಾರಿಗೆ ಇಲಾಖೆ ಅಧಿಕಾರಿಗಳು ಇದ್ದರು.