Uncategorized

ಬೆಳಗಾವಿ ಸೇರಿ 5 ಜಿಲ್ಲೆಗಳಲ್ಲಿ ನಾಳೆಯಿಂದ ಕೋವಿಡ್ ವ್ಯಾಕ್ಸಿನ್ ಅಭಿಯಾನ: ಸಚಿವ ಸುಧಾಕರ್

Share

ಬೆಳಗಾವಿ ಸೇರಿದಂತೆ ಕರ್ನಾಟಕದ 5 ಜಿಲ್ಲೆಗಳಲ್ಲಿ ಕೋವಿಡ್ ವ್ಯಾಕ್ಸಿನ್ ಅಭಿಯಾನದ ಪೂರ್ವಭಾವಿ ಕಾರ್ಯಕ್ರಮ ಶನಿವಾರದಿಂದ ಆರಂಭವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾತನಾಡಿ, ವ್ಯಾಕ್ಸಿನ್ ನೀಡುವಾಗ ಅನುಸರಿಸಬೇಕಾದ ಹಂತಗಳ ಕುರಿತು ಡ್ರೈರನ್ ನಡೆಸಲಾಗುತ್ತದೆ. ಬೆಳಗಾವಿ,ಬೆಂಗಳೂರು, ಕಲಬುರಗಿ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಯಲಿದೆ. ಜಿಲ್ಲೆಯ ಜಿಲ್ಲಾ ಕೇಂದ್ರ, ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈರನ್ ನಡೆಯಲಿದೆ. ಲಸಿಕೆ ಬಂದ ಕೂಡಲೇ ಹೊಸ ವರ್ಷದಲ್ಲಿ ರಾಜ್ಯದ ಜನರಿಗೆ ನೀಡಲಾಗುತ್ತದೆ ಎಂದು ತಿಳಿಸಿದರು.

ಒಟ್ಟಿನಲ್ಲಿ ವ್ಯಾಕ್ಸಿನ್ ನೀಡುವಾಗ ಅನುಸರಿಸಬೇಕಾದ ಹಂತಗಳ ಕುರಿತು ಬೆಳಗಾವಿ,ಬೆಂಗಳೂರು, ಕಲಬುರಗಿ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಯಲಿದೆ ಎಂದು ಸಚಿವ ಡಾ.ಸುಧಾಕರ್ ತಿಳಿಸಿದರು.

Tags:

error: Content is protected !!