ಸಚಿವ ಸ್ಥಾನ ನೀಡುವ ಸಂಬಂಧ ಅಧಿಕೃತವಾಗಿ ನನಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪನವರು ನನಗೆ ಮಂತ್ರಿ ಸ್ಥಾನ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಚಿವ ಸ್ಥಾನದ ಆಕಾಂಕ್ಷಿ ಎಂಲ್‍ಸಿ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.

: ಈ ಬಾರಿ ಎಂಟಿಬಿ ನಾಗರಾಜ್‍ಗೆ ಮಂತ್ರಿ ಸ್ಥಾನ ಸಿಗುತ್ತದೆ ಎಂಬ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿರುವ ಎಂಟಿಬಿ ಬುಧವಾರ ಸಚಿವ ಸಂಪುಟ ವಿಸ್ತರಣೆ ನಿಗದಿಯಾಗಿದೆ. ಆದ್ರೆ ಈವರೆಗೂ ಅಧಿಕೃತವಾಗಿ ನನಗೆ ಯಾವುದೇ ಮಾಹಿತಿ ಬಂದಿಲ್ಲ. ಇನ್ನು ನನಗೆ ಸಚಿವ ಸ್ಥಾನ ಈ ಬಾರಿ ಸಿಎಂ ಕೊಡುತ್ತಾರೆ ಎಂದರು. ಇನ್ನು ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿರ್ವಹಿಸುತ್ತೇನೆ. ಏನೂ ಸಿದ್ಧತೆ ಮಾಡಿಕೊಂಡಿಲ್ಲ. ಕೋರ್ಟ್ ಗೀಟು ಹಾಕಿಕೊಂಡು ನಾನು ಹೋಗುವುದಿಲ್ಲ. ಈಗ ಹೇಗಿದ್ದೇನೋ ಹಾಗೇ ಹೋಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ. ಸಾರ್ವಜನಿಕರಿಗೆ ಕೆಲಸ ಮಾಡಬೇಕು. ಸಾರ್ವಜನಿಕರಿಗೆ ಅನುಕೂಲ ಆಗುವ ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಒಟ್ಟಾರೆ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಖುಷಿಯಲ್ಲಿದ್ದ ಎಂಟಿಬಿ ನಾಗರಾಜ್ ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆಯುತ್ತಿರುವುದು ಕಂಡು ಬಂತು.