ಮಸ್ಕಿ ವಿಧಾನಸಭಾ ಕ್ಷೇತ್ರದ ವಿವಿಧ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರೈತರೊಂದಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚಿಸಿದರು.
ಈ ವೇಳೆ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಮಸ್ಕಿ ವಿಧಾನಸಭಾ ಕ್ಷೇತ್ರದ ವಿವಿಧ ನೀರಾವರಿ ಯೋಜನೆಗಳನ್ನು ಪ್ರಸ್ತಾಪಿಸಿ ಇಲಾಖೆಯ ಕಾರ್ಯಪ್ರಗತಿಯನ್ನು ವಿವರಿಸಿದರು. ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂವಾದ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನಿಲ್ ಕುಮಾರ್, ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ, ರಾಯಚೂರು ಕ್ಷೇತ್ರದ ಶಾಸಕ ಡಾ.ಶಿವರಾಜ್ ಪಾಟೀಲ್, ಮಸ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸೇರಿದಂತೆ ರೈತ ಮುಖಂಡರು ಹಾಜರಿದ್ದರು.