ಬೆಳಗಾವಿ ಸೇರಿ ಮರಾಠಿ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಖಂಡಿಸಿ ಕರ್ನಾಟಕ ಯುವ ಶಕ್ತಿ ವೇದಿಕೆಯ ಮುಖಂಡರು, ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬೆಳಗಾವಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬುಧವಾರ ಮೆರವಣಿಗೆ ನಡೆಸಿದ ಕರ್ನಾಟಕ ಯುವ ಶಕ್ತಿ ವೇದಿಕೆಯ ಮುಖಂಡರು, ಕಾರ್ಯಕರ್ತರು . ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಉದ್ಧಟತನ ಹೇಳಿಕೆ ನೀಡಿದ ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಕರ್ನಾಟಕ ಯುವ ಶಕ್ತಿ ವೇದಿಕೆಯ ಮುಖಂಡ ಮಾತನಾಡಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧಟತನದ ಹೇಳಿಕೆಯನ್ನು ಖಂಡಿಸುತ್ತೇವೆ. ಹಾಗೆ ಹೇಳಿಕೆ ನೀಡಿದವರು ಕ್ಷಮೆ ಕೇಳುವಂತೆ ಒತ್ತಾಯ ಮಾಡಬೇಕು. ರಾಜ್ಯ ಸರ್ಕಾರದ ಸಚಿವರು, ಶಾಸಕರು ಕ್ಷಮೆ ಕೇಳುವವರೆಗೂ ಅವರನ್ನು ಬಿಡಬಾರದು ಎಂದು ಕರ್ನಾಟಕ ಸರಕಾರಕ್ಕೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದೇವೆ ಎಂದರು.
ಕರ್ನಾಟಕ ಯುವ ಶಕ್ತಿ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ರವಿ ಎನ್.ಭಾಗೋಜಿ, ರಮೇಶ ಮುರ್ಕಿಬಾವಿ, ಸುರೇಶ ಗೌಡರ, ಜಿ.ಮಲ್ಲೇಶ, ವಿ.ಎನ್.ಉಡಚಣ, ಮಹೇಶ ದಂಡೀನ್, ರಮೇಶ ತಿಗಡಿ ಮತ್ತಿತರರು ಇದ್ದರು.