Uncategorized

ಮೇ ನಲ್ಲಿ ಪಿಯು, ಜೂನ್‍ನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಸಚಿವ ಸುರೇಶಕುಮಾರ್

Share

ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಗುರುವಾರ ಪ್ರಕಟ ಮಾಡಲಾಗುವುದು, ಇನ್ನು 1 ರಿಂದ 9 ನೇ ತರಗತಿಯ ಪಠ್ಯ ಕಡಿತ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.


ಮೇ 2 ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದೆ. ಜೂನ್ ಮೊದಲನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಶುರುವಾಗಲಿದೆ. ಗುರುವಾರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪಠ್ಯ ಕಡಿತದ ಕುರಿತಾಗಿಯೂ ಮಾಹಿತಿ ನೀಡಲಾಗುವುದು, 1 ರಿಂದ 9 ನೇ ತರಗತಿಯ ಪಠ್ಯ ಕಡಿತ ಮಾಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Tags:

error: Content is protected !!