COVID-19

ಮೊದಲ ಹಂತದಲ್ಲಿ ರಾಜ್ಯದ 16 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ..ಸಿಎಂ ಬಿಎಸ್‍ವೈ

Share

ಜ.16ರರಿಂದ ರಾಜ್ಯದಲ್ಲಿ ಮೊದಲ ಹಂತದಲ್ಲಿ 16 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಸೋಮವಾರ ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೋವಿಡ್ ವ್ಯಾಕ್ಸಿನೇಶನ್‍ಗೆ ಸಂಬಂಧಿಸಿದಂತೆ ನಡೆದ ವಿಡಿಯೋ ಸಂವಾದದ ಬಳಿಕ ಮಾತನಾಡಿದ ಸಿಎಂ ಬಿಎಸ್‍ವೈ ಕರ್ನಾಟಕ ರಾಜ್ಯದಲ್ಲಿ 235 ಕೇಂದ್ರಗಳಲ್ಲಿ ಕೋವಿಡ್ ನಿಯಂತ್ರಣ ಲಸಿಕೆ ವಿತರಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಲಸಿಕೆ ಶೇಖರಣೆಗೆ ಕೋಲ್ಡ್ ಸ್ಟೋರೇಜ್, ಹಂಚಿಕೆ, ವಿತರಣೆ, ನೀಡುವಿಕೆ ಸೇರಿದಂತೆ ಎಲ್ಲ ವ್ಯವಸ್ಥೆಗಳಿಗೆ ಎಲ್ಲ ಹಂತದಲ್ಲೂ ನಿಗಾವಹಿಸಲಾಗಿದೆ. ಹಂತ-ಹಂತವಾಗಿ ಲಸಿಕೆ ವಿತರಣೆ ಮಾಡಲಿದ್ದು, ಜನರು ಸಹಕಾರ ನೀಡಬೇಕು ಎಂದು ಈ ವೇಳೆ ರಾಜ್ಯದ ಜನತೆಯಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡರು.

ಕೊರೊನಾ ವಾರಿಯರ್ಸ್ ಬಳಿಕ ಸಾಮಾನ್ಯ ಜನರಿಗೂ ಕೊರೊನಾ ಲಸಿಕೆ ನೀಡಲಾಗುತ್ತದೆ. ಭಾರತೀಯ ಕಂಪೆನಿಗಳು ತಯಾರಿಸಿದ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಎರಡೂ ಲಸಿಕೆಗಳನ್ನು ದೇಶದ 3 ಕೋಟಿ ಜನರಿಗೆ ಉಚಿತವಾಗಿ ನೀಡಲು ಸಿದ್ಧತೆ ಪ್ರಧಾನಿ ಮೋದಿ ಅವರು ನಿರ್ಧರಿಸಿದ್ದಾರೆ. ಅದೇ ರೀತಿ ಕೇಂದ್ರ ಸರಕಾರವೇ ವೆಚ್ಚವನ್ನು ಭರಿಸಲಿದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿ 16 ಲಕ್ಷಕ್ಕೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಒಟ್ಟಾರೆ ದೇಶದ 3 ಕೋಟಿ ಆರೋಗ್ಯ ಕಾರ್ಯಕರ್ತರಲ್ಲಿ ಮೊದಲ ಹಂತದಲ್ಲಿ ರಾಜ್ಯದ 16 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ಭಾಗ್ಯ ಸಿಗಲಿದೆ.

 

Tags:

error: Content is protected !!