Politics

ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೆ..ಪುತ್ರ ಬಿ.ವೈ.ವಿಜಯೇಂದ್ರ ಮಹತ್ವದ ಹೇಳಿಕೆ..!

Share

ದೆಹಲಿಗೆ ತೆರಳಿದ್ದ ಸಿಎಂ ಯಡಿಯೂರಪ್ಪ ಕರ್ನಾಟಕ ಭವನದಿಂದ ಈಗಾಗಲೇ ಏರ್‌ಪೋರ್ಟ್ ತೆರಳಿದ್ದು, ವಿಮಾನದ ಮೂಲಕ ಬೆಂಗಳೂರಿಗೆ ಇಂದು ರಾತ್ರಿಯೇ ವಾಪಸ್ ಬರುತ್ತಿದ್ದಾರೆ.

ಬಿಜೆಪಿ ವರಿಷ್ಠರ ಸಭೆಯ ಬಳಿಕ ಹೇಳಿಕೆ ನೀಡಿದ್ದ ಸಿಎಂ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಶೀಘ್ರದಲ್ಲೇ ಗುಡ್ ನ್ಯೂಸ್ ಹೊರಬೀಳಲಿದೆ ಎಂದಿದ್ದರು. ಅದನ್ನು ಬಿಟ್ಟು ಬೇರೇನು ಹೇಳಲು ಹೋಗಿರಲಿಲ್ಲ.
ಆದ್ರೆ ಈ ನಡುವೆ ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೆ ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆಯಾಗಿದೆ ಎನ್ನಲಾಗಿದ್ದು, ಇದೀಗ ಈ ವಿಚಾರಕ್ಕೆ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ತೆರೆ ಎಳೆದಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು ನಾಯಕತ್ವ ವಿಚಾರದಲ್ಲಿ ಯಾವುದೇ ಗೊಂದಲಗಳು ಇಲ್ಲ, ಗೊಂದಲ ಇರುವುದು ಮಾತ್ರ ಮಾಧ್ಯಮಗಳಲ್ಲಿ ಎಂದಿದ್ದಾರೆ.
ಒಟ್ಟಾರೆ ಸಿಎಂ ಬಿಎಸ್‌ವೈ ಹಾಗೂ ಪುತ್ರ ವಿಜಯೇಂದ್ರ ಮಾತ್ರ ಯಾವುದೇ ಗುಟ್ಟು ಬಿಟ್ಟು ಕೊಡುತ್ತಿಲ್ಲ.

Tags:

error: Content is protected !!