ಅವನ್ಯಾರೋ ನೀರಾವರಿ ಸಚಿವ ಮಾತನ್ನಾಡಿದ್ದಾನೆ. ಸಿ.ಪಿ. ಯೋಗೇಶ್ವರ್ ಒಂಬತ್ತು ಕೋಟಿ ರೂಪಾಯಿ ಖರ್ಚು ಮಾಡಿದ್ದಾರಂತೆ. ಮನೆ ಮಾರಿ ಸಾಲ ಮಾಡಿ ಖರ್ಚು ಮಾಡಿದ್ದಾರಂತೆ. ನನ್ನ ಅವಧಿಯಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡುತ್ತಿದ್ದರು. ಈಗ ಇವರೆಲ್ಲ ಎಲ್ಲಿ ಹೋದರು? ಎಂದು ಐಟಿ ಇಲಾಖೆ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಸರ್ಕಾರ ಬೀಳಿಸುವ ಆಟದಲ್ಲಿ ಮುಂಬೈ ಟೀಮ್‍ನಲ್ಲಿದ್ದ ಸಿ.ಪಿ. ಯೋಗೇಶ್ವರ್ ಒಂಬತ್ತು ಕೋಟಿ ರೂಪಾಯಿ ಖರ್ಚು ಮಾಡಿದ್ದಾರಂತೆ. ಅವನ್ಯಾರೋ ನೀರಾವರಿ ಸಚಿವ ಮಾತನ್ನಾಡಿದ್ದಾನೆ. ಮನೆ ಮಾರಿ ಸಾಲ ಮಾಡಿ ಖರ್ಚು ಮಾಡಿದ್ದಾರೆ ಅಂತ ಹೇಳಿದ್ದಾರೆ. ನನ್ನ ಅವಧಿಯಲ್ಲಿ ದಾಳಿ ಮಾಡುತ್ತಿದ್ದ ಐಟಿ ಅಧಿಕಾರಿಗಳು ಮಲಗಿದ್ದಾರಾ ಎಂದು ವಾಗ್ದಾಳಿ ನಡೆಸಿದರು.
ಇನ್ನು ನಾನು ವೈಯಕ್ತಿಕ ಸಿಡಿಗಳನ್ನ ಇಟ್ಕೊಂಡು ರಾಜಕಾರಣ ಮಾಡೋದಿಲ್ಲ. ನಾನು ರಾಜಕೀಯವಾಗಿ ಬಳಸಿಕೊಳ್ಳುವ ದಾಖಲೆಗಳೇ ಬೇರೆ. ಯಡಿಯೂರಪ್ಪ ಕಳ್ಳರು ಮತ್ತು ದರೋಡೆಕೋರರನ್ನ ಸೇರಿಸಿಕೊಂಡಿದ್ದಾರೋ ಗೊತ್ತಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.