Belagavi

ರಸ್ತೆ ಮೇಲೆ ಕಸ ಎಸೆಯುವವರನ್ನ ಜೈಲಿಗೆ ಕಳುಹಿಸಿ-ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು

Share

ಬೆಳಗಾವಿಯ ಪ್ರವಾಸದಲ್ಲಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಇಂದು ಬೆಳ್ಳಿಗೆ ಮಹಾನಗರ ಪಾಲಿಕೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಬೆಳಗಾವಿಯ ಪ್ರವಾಸದಲ್ಲಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಇಂದು ಬೆಳ್ಳಿಗೆ ಮಹಾನಗರ ಪಾಲಿಕೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಇದಕ್ಕೂ ಮೊದಲೂ ಭಾರತರತ್ನ ಡಾ.ಬಿಆರ್ ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು. ನಂತರ ಸಂಸತ್ ಮಾದರಿಯ ಕಟ್ಟಡ ಕಾಮಗಾರಿಯನ್ನ ಪರಿಶೀಲಿಸಿದರು.

ಇದಾದ ಬಳಿಕ ನೂತನ ಕಸ ವಿಲೇವಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿಸಿ ಲೋಕಾರ್ಪಣೆ ಮಾಡಿದರು. ಈ ವೇಳೆ ಸಚಿವ ಭೈರತಿ ಬಸವರಾಜು ಅವರು ಎಲ್ಲೆಂದರಲ್ಲಿ ಕಸ ಎಸೆದು ನಗರದಲ್ಲಿ ಅಸ್ವಚ್ಛತೆಯನ್ನ ಸೃಷ್ಠಿ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಂಡು ಜೈಲಿಗೆ ಕಳುಹಿಸಬೇಕೆಂದು ಎಚ್ಚರಿಕೆ ನೀಡಿದರು. ನಂತರ ನಡೆದ ಸಭೆಯಲ್ಲಿ ಮಹಾಪಾಲಿಕೆಯ ಪ್ರಗತಿಯನ್ನ ಪರಿಶೀಲಿಸಿದರು.
ಈ ವೇಳೆ ಶಾಸಕ ಅನೀಲ ಬೆಣಕೆ, ಶಾಸಕ ಅಭಯ ಪಾಟೀಲ, ಜಿಲ್ಲಾಧಿಕಾರಿ ಎಂಜಿ ಹಿರೇಮಠ, ಮಹಾಪಾಲಿಕೆ ಆಯುಕ್ತ ಜಗದೀಶ ಕೆಎಚ್ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.

Tags:

error: Content is protected !!