ಕಾಂಗ್ರೆಸ್ ನೇತೃತ್ವದಲ್ಲಿ ರಾಜ್ಯಭವನ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಲು ಹೊರಟಿದ್ದ ರೈತರನ್ನು ಪೆÇಲೀಸರು ಆಯಾ ಜಿಲ್ಲಾ ಕೇಂದ್ರಗಳಲ್ಲೇ ಅಡ್ಡಗಟ್ಟಿ ತಡೆಯುವ ಪ್ರಯತ್ನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕೃಷಿ ಕಾಯ್ದೆ ಹಿಂದಕ್ಕೆ ಪಡೆಯುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾಂಗ್ರೆಸ್ ನೇತೃತ್ವದಲ್ಲಿ ರೈತರು ಇಂದು ಬೆಂಗಳೂರಿನಲ್ಲಿ ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಭವನ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಲು ಸಾವಿರಾರು ಮಂದಿ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿದ್ದರು. ಬೆಂಗಳೂರಿನಲ್ಲಿ ಹೆಚ್ಚಿನ ದಟ್ಟಣೆ ಉಂಟಾಗುವುದನ್ನು ತಪ್ಪಿಸಲು ಪೆÇಲೀಸರು ಆಯಾ ಜಿಲ್ಲಾ ಕೇಂದ್ರಗಳಲ್ಲೇ ಕಾರ್ಯರ್ತರನ್ನು ಅಡ್ಡಗಟ್ಟಿ ತಡೆಯುವ ಪ್ರಯತ್ನ ಮಾಡಿದರು. ದೂರದ ಊರುಗಳಿಂದ ಬೆಂಗಳೂರಿಗೆ ಬರಲು ಮಂಗಳವಾರವೇ ಪ್ರಯಾಣ ಆರಂಭಿಸಿದವರು ಮಧ್ಯ ರಾತ್ರಿ ಪೆÇಲೀಸರು ತಡೆಯುತ್ತಿದ್ದಂತೆ ಆಕ್ರೋಶಗೊಂಡು ಹಿರಿಯ ನಾಯಕರನ್ನು ಸಂಪರ್ಕಿಸಿದರು. ಹೀಗಾಗಿ ಹಿರಿಯ ಸದಸ್ಯರ ಮೂಲಕ ಕಾರ್ಯಕರ್ತರಿಗೆ ಸ್ಪಷ್ಟ ಸೂಚನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪೆÇಲೀಸರು ಎಲ್ಲಿ ತಡೆಯುತ್ತಾರೋ ಅಲ್ಲಿಯೇ ಶಾಂತಿಯುತ ಪ್ರತಿಭಟನೆ ಮಾಡಿ, ರಸ್ತೆ ತಡೆ ನಡೆಸಿ ಎಂದು ಸಲಹೆ ನೀಡಿದರು.ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕಿದೆ.
ಜನ ವಿರೋ ಅನುಸರಿಸುತ್ತಿರುವ ಬಿಜೆಪಿ ಸರ್ಕಾರ ಪ್ರತಿಭಟನೆಗೂ ಅವಕಾಶ ಕೊಡದೆ ಸರ್ವಾಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಕಿಡಿಕಾರಿದರು.ಅಧ್ಯಕ್ಷರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು ಬಹಳಷ್ಟು ಕಡೆ ಜಿಲ್ಲಾ ಕೇಂದ್ರಗಳಲ್ಲೇ ಪ್ರತಿಭಟನೆ ನಡೆಸಿ ರಾಜಭವನ ಚಲೋಗೆ ಬೆಂಬಲ ಸೂಚಿಸಿದರು.