ಕೊರೊನಾಗೆ ಯಾರೂ ಹೆದರುವ ಅಗತ್ಯವಿಲ್ಲ. ಪೆÇೀಷಕರು ಧೈರ್ಯದಿಂದ ಮಕ್ಕಳನ್ನು ಶಾಲೆಗೆ ಕಳುಹಿಸಿ. ರಾಜ್ಯ ಸರ್ಕಾರ ಅಗತ್ಯವಾದ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.
ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ ಜನವರಿ 1ರಿಂದ ಶಾಲಾ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಪರಿಣಾಮ 10 ತಿಂಗಳ ನಂತರ ಶಾಲಾ ಕಾಲೇಜುಗಳು ಎಂದಿನಂತೆ ಆರಂಭವಾಗಿವೆ. ಹೀಗಾಗಿ ಮಕ್ಕಳೂ ಸಹ ಉತ್ಸಾಹದಿಂದಲೇ ಶಾಲೆಗೆ ತೆರಳಿದ್ದು, ಶಿಕ್ಷಕರು ಮಕ್ಕಳನ್ನು ಸಂತೋಷದಿಂದಲೇ ಬರಮಾಡಿಕೊಂಡಿದ್ದಾರೆ. ಆದರೆ, ದುರಾದೃಷ್ಟವಶಾತ್ ರಾಜ್ಯದ ಹಲವು ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಪಾಲಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ.
ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವ ಡಾ.ಕೆ.ಸುಧಾಕರ್ ರಾಜ್ಯದ 25 ಶಿಕ್ಷಕರಿಗೆ ಕೊರೋನಾ ಸೋಂಕು ತಗುಲಿರುವುದು ಇದೀಗ ದೃಢಪಟ್ಟಿದೆ. ಹೀಗಾಗಿ ಪೆÇೀಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ದಾಖಲಾತಿ ಕಡಿಮೆಯಾಗುವ ಆತಂಕ ಎದುರಾಗಿದೆ. ಆದ್ರೆ ಲಕ್ಷದ ಮುಂದೆ 25 ಪ್ರಕರಣಗಳು ದೊಡ್ಡ ವಿಚಾರವಲ್ಲ. ಹೀಗಾಗಿ ಯಾರೂ ಹೆದರುವ ಅಗತ್ಯ ಇಲ್ಲ ಎಂದರು.
ಇದೇ ವೇಳೆ ರೂಪಾಂತರಿ ಕೊರೊನಾ ವೈರಸ್ ಕುರಿತು ಮಾತನಾಡಿದ ಅವರು ಸೋಂಕಿತರ ಜೊತೆಗೆ 17 ಜನ ಪ್ರೈಮರಿ ಕಾಂಟಾಕ್ಟ್ ಇದೆ. ಇವರನ್ನು ಐಸೋಲೇಷನ್ ಮಾಡಿ ಇವರ ಕಾಂಟಾಕ್ಟ್‍ಗಳನ್ನು ಹುಡುಕುವ ಕೆಲಸ ಮಾಡಲಾಗುತ್ತಿದೆ. ಅಲ್ಲದೇ ಅವರ ಪ್ರೈಮರಿ ಹಾಗೂ ಸೆಕೆಂಡರಿ ಕಾಂಟಾಕ್ಟ್ ಟ್ರೇಸ್ ಮಾಡಲಾಗಿದೆ. ಇದರಿಂದ ಹೆಚ್ಚು ಸೋಂಕು ಹರಡುವುದು ಎಂದು ಕೊಳ್ಳೋದು ಬೇಡ. ಇನ್ನು ಇಂಗ್ಲೆಂಡ್‍ನಿಂದ ಕರ್ನಾಟಕಕ್ಕೆ ಆಗಮಿಸಿರುವ ಕೆಲವು ಪ್ರಯಾಣಿಕರು ಕಾಣೆಯಾಗಿದ್ದಾರೆ.
ಈವರೆಗೆ 7 ಜನರ ಮಾಹಿತಿ ಮಾತ್ರ ನಮ್ಮಲ್ಲಿದೆ. ಉಳಿದವರನ್ನು ಹುಡುಕುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.
ಒಟ್ಟಾರೆ ಶಿಕ್ಷಕರಿಗೆ ಕೊರೊನಾ ಸೋಂಕು ಹಾಗೂ ಬ್ರಿಟನ್ ವೈರಸ್ ಸೋಂಕಿತರ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.