ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಇನ್ನೂ ಎರಡೂವರೆ ವರ್ಷ ಯಡಿಯೂರಪ್ಪ ಅವರೇ ಮುಂದುವರಿಯಲಿದ್ದಾರೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಇದನ್ನೇ ಸ್ಪಷ್ಟಪಡಿಸಿದ್ದಾರೆ ಎಂದು ಮತ್ತೆ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಪುನರ್ ಉಚ್ಛರಿಸಿದ್ದಾರೆ.
ಚಾಮರಾಜನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಗದೀಶ ಶೆಟ್ಟರ್ ಮುಖ್ಯಮಂತ್ರಿ ಬದಲಾವಣೆ ಸತ್ಯಕ್ಕೆ ದೂರವಾದ ವಿಚಾರ ಎಂದು ಸ್ಪಷ್ಟಪಡಿಸಿದರು. ಇನ್ನು ಹೈಕಮಾಂಡ್ ಸೂಚಿಸಿದರೆ ನೀವು ಸಿಎಂ ಆಗಲು ಸಿದ್ಧರಿದ್ದೀರಾ ಎಂದು ಕೇಳಿದ್ದಕ್ಕೆ, ಅರುಣ್ ಸಿಂಗ್ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ, ಇಂತಹ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.
ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ರೇಣುಕಾಚಾರ್ಯ ನಡುವಿನ ವಾಗ್ವಾದ ವಿಚಾರ ನನಗೆ ಸಂಬಂಧಿಸಿದ್ದಲ್ಲ. ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ಈ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಜಾರಿಕೊಂಡರು