ರಾಜ್ಯ ಸಚಿವ ಸಂಪುಟಕ್ಕೆ ಸರ್ಜರಿ ಜನವರಿ 13 ಅಥವಾ 14 ರಂದು ನಡೆಯಲಿದೆ. ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬುದು ಅಂದೇ ತಿಳಿಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಅದು ಪುನರ್ ರಚನೆಯೋ ಅಥವ ವಿಸ್ತರಣೆಯೋದು ಅದು ಅವತ್ತಿಗೆ ಗೊತ್ತಾಗಲಿದೆ. 13ರ ಮಧ್ಯಾಹ್ನ ಅಮಾವಾಸ್ಯೆ ಕಳೆಯುತ್ತದೆ. ಆ ನಂತರ ಒಳ್ಳೆಯ ಸಮಯ ಅಂತ ಹೇಳಿದ್ದಾರೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸಮಯ ಕೇಳಿಕೊಂಡು ನಿಮಗೂ ಸಮಯ ತಿಳಿಸುತ್ತೇವೆ ಎಂದರು.
ಸಿಎಂ ಬದಲಾಗುತ್ತಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ನಾನು ಯಾವಾಗ ಅಧಿಕಾರದಿಂದ ಇಳಿಯುತ್ತೇವೆ ಎಂಬುದನ್ನ ಸಿದ್ದರಾಮಯ್ಯನವರೇ ಹೇಳಲಿ. ಹಾಗೇ ಸುದ್ದಿ ಮಾಡುವ ಮಾಧ್ಯಮದರೊಂದಿಗೆ ಕುಳಿತು ದಿನಾಂಕ ನಿಗದಿ ಮಾಡಲಿ ಎಂದು ಹೇಳಿದರು.
ರಾಜ್ಯದ ಹಣಕಾಸು ಪರಿಸ್ಥಿತಿ ಸರಿಯಿಲ್ಲ. ಆದ್ರೂ ಪರಿಸ್ಥಿತಿ ನೋಡಿಕೊಂಡು ಒಳ್ಳೆಯ ಬಜೆಟ್ ಮಂಡಿಸುವೆ. ರೈತರಿಗೆ ಅನುಕೂಲವಾಗುವಂತೆ ಬಜೆಟ್ ಮಂಡಿಸುವೆ ಎಂದು ಬಿಎಸ್‍ವೈ ತಿಳಿಸಿದರು.