State

ರಾಜ್ಯ ಸಚಿವ ಸಂಪುಟಕ್ಕೆ 7 ಸಚಿವರು: ಸಿಎಂ ಯಡಿಯೂರಪ್ಪ

Share

:ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ 7 ನೂತನ ಸಚಿವರ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದೆ. ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ಹಾಗೂ ಅಂಗಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ರಾಜ್ಯ ಸಂಪುಟಕ್ಕೆ ವರಿಷ್ಠರ ಸೂಚನೆಯಂತೆ 7 ಜನರನ್ನು ಸೇರಿಸಿಕೊಳ್ಳಲಾಗುತ್ತಿದೆ. ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ಹಾಗೂ ಅಂಗಾರ . ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಒಂದು ಸ್ಥಾನ ಖಾಲಿ ಇಡಲಾಗಿದ್ದು, ವರಿಷ್ಠರು ಬಂದ ಬಳಿಕ ಅವರೊಂದಿಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಿಎಂ ನೀಡಿದ ಮಾಹಿತಿಯಲ್ಲಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಹೆಸರಿಲ್ಲ. ಹಾಗಾಗಿ ಮುನಿರತ್ನಗೆ ಕೊನೆಗೂ ಸಚಿವ ಸ್ಥಾನ ಕೈತಪ್ಪಿದಂತಾಗಿದೆ.ಇಂದು 7 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Tags:

error: Content is protected !!