Belagavi

ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ

Share

ಬೆಳಗಾವಿ: ಭಾರತೀಯ ಓಲಂಪಿಕ್ ಸಂಸ್ಥೆಯಿಂದ ಮಾನ್ಯತೆ ಪಡೆದ ಕ್ರೀಡೆಗಳಲ್ಲಿ 2019 ಮತ್ತು 2020ನೇ ಸಾಲಿನಲ್ಲಿ ಸಂಘಟಿಸಲಾದ ರಾಷ್ಟ್ರ ಮಟ್ಟದ ಪಂದ್ಯಾವಳಿಗಳಲ್ಲಿ ಪದಕ ವಿಜೇತ ಅಥವಾ ಅಂತರರಾಷ್ಟ್ರ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿದ/ಪದಕ ವಿಜೇತ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2020ನೇ ಸಾಲಿಗೆ ಸಲ್ಲಿಸಿದ ಅರ್ಹ ಅರ್ಜಿಗಳಿಗೆ ಪ್ರಥಮ ಆದ್ಯತೆಯನ್ನು ನೀಡಲಾಗುವುದು. ನಂತರ 2019ನೇ ಸಾಲಿಗೆ ಸಲ್ಲಿಸಿದ ಅರ್ಹ ಅರ್ಜಿಗಳನ್ನು ಪ್ರೋತ್ಸಾಹಧನ ಮಂಜೂರಾತಿಗೆ ಪರಿಗಣಿಸಲಾಗುವುದು (2019ನೇ ಸಾಲಿನಲ್ಲಿ ಈ ಯೋಜನೆ ಅಡಿ ಪ್ರಯೋಜನ ಪಡೆದ ಕ್ರೀಡಾಪಟುಗಳ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.)

ಅರ್ಹ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರ ಕಚೇರಿ ಜಿಲ್ಲಾ ಕ್ರೀಡಾಂಗಣ ಇವರಿಗೆ ಜ.19ರ ಒಳಗಾಗಿ ಸಲ್ಲಿಸುವುದು.
ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಕ್ರೀಡಾಂಗಣ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Tags:

error: Content is protected !!