ರೈತರು ಆತ್ಮಹತ್ಯೆಗೆ ಮುಂದಾಗುವುದಾದರೆ ಅದಕ್ಕೆ ರೈತರ ವೀಕ್ ಮೈಂಡ್ ಕಾರಣವೇ ಹೊರತು ಸರಕಾರದ ನೀತಿ ಅಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾತನಾಡಿ, ಸರಕಾರ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಲು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ರೈತರನ್ನು ರೈತೋದ್ಯಮಿಗಳನ್ನಾಗಿ ಮಾಡಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರ ಬೆಳೆಗೆ ಬೆಲೆ ನೀಡಬೇಕು ಎಂಬುದು ಸರ್ಕಾರದ ಸದುದ್ದೇಶವಾಗಿದೆ. ರೈತರ ಆತ್ಮಹತ್ಯೆಗೆ ಸರ್ಕಾರದ ನೀತಿ ಕಾರಣವಲ್ಲ. ರೈತರ ಮೈಂಡ್ ವೀಕ್ ಆದಾಗ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ಒಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ಎಂದು ಪ್ರತಿಪಾದಿಸಿ ಮತ್ತೊಂದು ವಿವಾದ ಹುಟ್ಟು ಹಾಕಿದ್ದಾರೆ.