ದೆಹಲಿಯಲ್ಲಿ ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರ ಜೊತೆಗಿನ ಕೇಂದ್ರ ಸರ್ಕಾರದ 8ನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿದೆ.
ಹೌದು ದೆಹಲಿಯ ವಿಜ್ಞಾನ ಭವನದಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ ಸಭೆ ಮತ್ತೆ ವಿಫಲವಾಗಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ರೈತ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ಒಮ್ಮತ ಮೂಡದ ಹಿನ್ನೆಲೆ ಮತ್ತೊಮ್ಮೆ ವಿಫಲವಾಗಿದ್ದು, ಇದೇ ಜನವರಿ 15ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ ಎನ್ನಲಾಗುತ್ತಿದೆ.
ಒಟ್ಟಾರೆ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವಿನ ಹಗ್ಗ ಜಗ್ಗಾಟ ಇಷ್ಟಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ.