Uncategorized

ವಿದ್ಯುತ್ ಮಗ್ಗ ನೇಕಾರರಿಗೆ ಆರ್ಥಿಕ ನೆರವು ಯೋಜನೆ

Share

ಬೆಳಗಾವಿ: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕ ಸಂಕಷ್ಟಕ್ಕೊಳಗಾದ ವಿದ್ಯುತ್ ಮಗ್ಗಗಳಲ್ಲಿ ಕೆಲಸ ಮಾಡುತ್ತಿರುವ ಕೂಲಿ ನೇಕಾರರು/ಕಾರ್ಮಿಕರಿಗೆ ರೂ.2,000/- ಗಳ ಒಂದು ಬಾರಿಯ ಪರಿಹಾರಧನ ಪಡೆಯುವ ಕುರಿತು ಮಾಹಿತಿ ಇಲ್ಲಿದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ನೇಕಾರರು/ಮಾಲೀಕರನ್ನು ಹೊರತುಪಡಿಸಿ, ಇದುವರೆಗೆ ಅರ್ಜಿ ಸಲ್ಲಿಸದೇ ಇರುವ ನೇಕಾರರು/ಮಾಲೀಕರು ಜ.12ರ ಒಳಗಾಗಿ ಈ ಕಚೇರಿಗೆ (ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ, ಸಾಮಥ್ರ್ಯ ಸೌಧ ಕಟ್ಟಡ, ಹರಿಮಂದಿರ ರಸ್ತೆ, ಅನಗೋಳ, ಬೆಳಗಾವಿ-590006) ನೇರವಾಗಿ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
ಸದರಿ ದಿನಾಂಕವು ಕೊನೆಯ ದಿನವಾಗಿದ್ದು ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವಿಕರಿಸಲಾಗುವುದಿಲ್ಲ. ಇದು ಅಂತಿಮ ಪ್ರಕಟಣೆಯಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ದೂರವಾಣಿ ಸಂಖ್ಯೆ: 0831-2950674 ಗೆ ಸಂಪರ್ಕಿಸಿ ಎಂದು ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

error: Content is protected !!