Uncategorized

ವಿಮಾನ ನಿಲ್ದಾಣದಲ್ಲಿ ಅಮಿತ್ ಶಾ ಸ್ವಾಗತಿಸುವವರ ಪಟ್ಟಿಯಿಂದ ಕೆಲವರನ್ನು ಕೈಬಿಟ್ಟದ್ದು ಗೊತ್ತಿಲ್ಲ: ಡಾ.ಸೋನಾಲಿ ಸರ್ನೋಬತ್

Share

 


ಬೆಳಗಾವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರುವವರ ಪಟ್ಟಿಯಲ್ಲಿ ನನ್ನ ಹೆಸರು ಇತ್ತು. ಹಾಗಾಗಿ ವಿಮಾನ ನಿಲ್ದಾಣಕ್ಕೆ ಬಂದೆ. ಆದರೆ ಉಳಿದವರಿಗೆ ಏಕೆ ಅವಕಾಶ ನೀಡಿಲ್ಲ ಎಂಬುದು ನನಗೆ ಗೊತ್ತಿಲ್ಲ. ಯಾರು ಏನು ಪ್ರತಿಕ್ರಿಯೆ ನೀಡಿದ್ದಾರೆ ಎಂಬುದನ್ನು ತಿಳಿದುಕೊಂಡು ಮಾತನಾಡುತ್ತೇನೆ ಎಂದು ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ತಿಳಿಸಿದರು.

ಬೆಳಗಾವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರುವವರ ಪಟ್ಟಿಯನ್ನು ತಯಾರಿಸಿದ್ದಾರೆ. ನಾನು ನಿಯತಿ ಫೌಂಡೇಶನ್ ಸೇರಿ ಹಲವು ಸಂಸ್ಥೆಗಳ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿದ್ದೇನೆ. ನನ್ನ ಬಳಿ 6 ಹುದ್ದೆಗಳು ಇಲ್ಲ. ಪಟ್ಟಿಯಲ್ಲಿ ನನ್ನ ಹೆಸರು ಇತ್ತು. ಹಾಗಾಗಿ ವಿಮಾನ ನಿಲ್ದಾಣಕ್ಕೆ ಬಂದೆ. ಆದರೆ ಉಳಿದವರಿಗೆ ಏಕೆ ಅವಕಾಶ ನೀಡಿಲ್ಲ ಎಂಬುದು ನನಗೆ ಗೊತ್ತಿಲ್ಲ. ದೀಪಾ ಕುಡಚಿ ಏನು ಹೇಳಿದ್ದಾರೆ ಎಂಬುದನ್ನು ನೋಡಿಕೊಂಡು ಮಾತನಾಡುತ್ತೇನೆ ಎಂದು ತಿಳಿಸಿದರು.

ಒಟ್ಟಿನಲ್ಲಿ ಅಮಿತ್ ಶಾ ಸ್ವಾಗತಕ್ಕೆ ನಿನ್ನೆ ಮೊನ್ನೆ ಪಕ್ಷಕ್ಕೆ ಬಂದವರಿಗೆ ವಿಮಾನ ನಿಲ್ದಾಣ ಪ್ರವೇಶಿಸಲು ಅವಕಾಶ ನೀಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ಕಾಲಾವಕಾಶ ಕೊಡಿ ಎಂದು ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಪ್ರತಿಕ್ರಿಯಿಸಿದರು.

Tags:

error: Content is protected !!