Khanapur

ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಚಾಲನೆ

Share

ಖಾನಾಪೂರ ತಾಲೂಕಿನ ಮೂಗಾವಡೆ ಪ್ರಾಥಮಿಕ ಶಾಲೆಯ ಕೊಠಡಿ ಮತ್ತು ಜಾಂಬೋಟಿಯಲ್ಲಿ ಅಂಗನವಾಡಿ ಕಟ್ಟಡದ ನಿರ್ಮಾಣಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್ ಚಾಲನೆ ನೀಡಿದರು.

ಹೌದು ಖಾನಾಪೂರ ತಾಲೂಕಿನ ಮೂಗಾವಡೆ ಗ್ರಾಮದ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ತರಗತಿ ಕೊಠಡಿ ನಿರ್ಮಾಣಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್ ಭೂಮಿ ಪೂಜೆ ನೆರವೇರಿಸಿದರು. ಅದೇ ರೀತಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಸುಮಾರು 17ಲಕ್ಷದ ವೆಚ್ಚದಲ್ಲಿ ಜಾಂಬೋಟಿ ಗ್ರಾಮದ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿನ ಹಿರಿಯ ನಾಗರಿಕರಿಗೆ ಸಂಕ್ರಾಂತಿ ಹಬ್ಬದ ನಿಮಿತ್ಯ ಎಳ್ಳು ಬೆಲ್ಲ ನೀಡಿ ಆರ್ಶಿವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಹುಸಂಖ್ಯೆಯಲ್ಲಿ ಗ್ರಾಮಸ್ಥರು, ಎಸ್‍ಡಿಎಮ್‍ಸಿ ಸದಸ್ಯರು ಉಪಸ್ಥಿತರಿದ್ದರು.

Tags:

error: Content is protected !!