Politics

ಶಾಸಕರ ಸಭೆಯಲ್ಲಿಯೂ ಸಿಎಂ ಬಿಎಸ್‍ವೈ ವಿರುದ್ಧ ಯತ್ನಾಳ್ ಅಸಮಾಧಾನ

Share

ರಾಜ್ಯದಲ್ಲಿ ನಮ್ಮದೇ ಸರ್ಕಾರ ಆಡಳಿತ ನಡೆಸುತ್ತಿದ್ದರು. ಶಾಸಕರ ಕ್ಷೇತ್ರಕ್ಕೆ ಅನುದಾನಕ್ಕಾಗಿ ಬೇಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಹಲವು ವಿಚಾರಗಳಿಗೆ ಬಿಜೆಪಿ ಶಾಸಕರ ಅಸಮಾಧಾನವನ್ನು ತಣಿಸಲು ವಿಭಾಗವಾರು ಶಾಸಕರ ಸಭೆಗೆ ಇಂದು ಶಾಸಕರನ್ನು ಸಿಎಂ ಬಿಎಸ್ ಯಡಿಯೂರಪ್ಪ ಆಹ್ವಾನಿಸಿದ್ದರು. ಮುಂಬೈ ಕರ್ನಾಟಕ ಮತ್ತು ಮಧ್ಯ ಕರ್ನಾಟಕ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯವೈಖರಿ ಬಗ್ಗೆ ಯತ್ನಾಳ್ ಅಸಮಾಧಾನ ಹೊರಹಾಕಿದ್ದಾರೆ. ಶಾಸಕರ ಸಭೆಯಲ್ಲಿ ಮಾತನಾಡಿದ ಯತ್ನಾಳ್, ಆಡಳಿತ ಪಕ್ಷದ ಶಾಸಕರ ಕ್ಷೇತ್ರಕ್ಕೆ ಅನುದಾನ ಬೇಡುವಂತೆ ಆಗಿದೆ. ಇದು ಪ್ರತಿಪಕ್ಷ ಗಳಿಂದ ನಗೆಪಾಟಲಿಗೆ ಈಡಾಗುವ ವಿಚಾರ. ನಿಜವಾಗಿಯೂ ಸರ್ಕಾರ ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡುತ್ತಿಲ್ಲ. ಸರ್ಕಾರ ಈ ವಿಚಾರದಲ್ಲಿ ತಾರತಮ್ಯ ಎಸಗುತ್ತಿದೆ ಎಂದು ಪ್ರಶ್ನಿಸಿದರು.

ಒಟ್ಟಾರೆ ಇಲ್ಲಿಯ ತನಕ ಮಾಧ್ಯಮಗಳ ಮುಂದೆ ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಈ ಬಾರಿ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಮುಂದೆಯೇ ತಮ್ಮ ಅಸಮಾಧಾನ ಹೊರ ಹಾಕಿದ್ದು. ಈ ಎಲ್ಲಾ ಅಸಮಾಧಾನವನ್ನು ಸಿಎಂ ಬಿಎಸ್‍ವೈ ಯಾವ ರೀತಿ ಬಗೆಹರಿಸುತ್ತಾರೆ ಎಂದು ಕಾಯ್ದು ನೋಡಬೇಕಿದೆ.

 

Tags:

error: Content is protected !!