Chikkodi

ಶಿಕ್ಷಣ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯ ದಿಟ್ಟ ಹೆಜ್ಜೆ ಇಟ್ಟಿದೆ..ಎಂಎಲ್‍ಸಿ ಅರುಣ ಶಾಹಪುರ

Share

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಹಿನ್ನೆಲೆಯಲ್ಲಿ ಶಿಕ್ಷಕರು ಪರಿಣಾಮಕಾರಿ ಬೋಧನೆ ಮಾಡುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಬಲವರ್ಧನೆಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಾಹಾಪೂರ ಹೇಳಿದರು.

: ಚಿಕ್ಕೋಡಿಯ ಸಿಟಿಇ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಂಟು ವಲಯದ ಮುಖ್ಯಶಿಕ್ಷಕರಿಗೆ ಹಮ್ಮಿಕೊಂಡ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ದೇಶದಲ್ಲಿಯೇ ಮೊಟ್ಟ ಮೊದಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಿ ಸಂಪುಟದಲ್ಲಿ ಅನುಮೊದನೆಗೊಂಡಿದೆ. ಇದರಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯ ದಿಟ್ಟ ಹೆಜ್ಜೆ ಇಟ್ಟಿದೆ ಎಂದರು. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಬೇಕಾಗಿದೆ. ಹೊಸ ಶಿಕ್ಷಣ ನೀತಿಯ ಕುರಿತು ಶಿಕ್ಷಕರು ಅಧ್ಯಯನ ಮಾಡುವುದು ಅವಶ್ಯಕವಾಗಿದೆ. ಭಾರತವು ಹಾವಾಡಿಗರು ಮತ್ತು ಮೂಡನಂಭಿಕೆ ದೇಶವೆಂದು ಅಪಹಾಸ್ಯ ಮಾಡಿದ್ದಾರೆ, ಅಂಥವರಿಗೆ ಎದುರೆಟುಕೊಡಲು ಭಾರತ ಜಾಗತೀಕ ಸ್ಪರ್ಧೆಗೆ ಸಜ್ಜಾಗಬೇಕಿದೆ. ಹೀಗಾಗಿ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಶಿಕ್ಷಣದ ಬಗ್ಗೆ ಅರಿವು ಮೂಡಿಸಲು ಶಿಕ್ಷಕರು ಮುಂದಾಗಬೇಕು. ಶಿಕ್ಷಣದಲ್ಲಿ ಬದಲಾವಣೆ ತಂದು ಗುಣಮಟ್ಟದ ಶಿಕ್ಷಣಕ್ಕೆ ಹೆಜ್ಜೆ ಇಡಬೇಕಾಗಿದೆ ಎಂದು ವಿಧಾನಪರಿಷತ ಸದಸ್ಯ ಅರುಣ ಶಾಹಾಪೂರ ತಿಳಿಸಿದರು.

ವೇದಿಕೆ ಮೇಲೆ ಉಪನಿರ್ದೇಶಕ ಗಜಾನನ ಮನ್ನಿಕೇರಿ, ಸಿಟಿಇ ಸಂಸ್ಥೆಯ ಅಧ್ಯಕ್ಷ ಸಿ.ಬಿ.ಕುಲಕರ್ಣಿ, ಡಯಟ್ ಪ್ರಾಚಾರ್ಯ ಮೋಹನ ಜಿರಗಿಹಾಳ, ನಿಪ್ಪಾಣಿ ಬಿಇಒ ರೇವತಿ ಮಠದ, ರಾಯಬಾಗ ಬಿಇಒ ಪ್ರಭಾವತಿ ಪಾಟೀಲ, ಎಸ್.ಆರ್.ಡೋಂಗರೆ, ಅಲಗೌಡ ಸೊಲ್ಲಾಪೂರೆ, ಸುಭಾಷ ಸಂಕಪಾಳ, ದಯಾನಂದ ಹಿರೇಮಠ, ಪಿ.ಬಿ.ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

Tags:

error: Content is protected !!