Crime

ಶಿವಮೊಗ್ಗ ಜಿಲೆಟಿನ್ ಸ್ಫೋಟ ಕೇಸ್..ಮೃತ ಕುಟುಂಬಗಳಿಗೆ 5 ಲಕ್ಷ ಪರಿಹಾರ..ಸಿಎಂ ಬಿಎಸ್‍ವೈ ಘೋಷಣೆ

Share

ಶಿವಮೊಗ್ಗ ಜಿಲೆಟಿನ್ ಸ್ಪೋಟಕ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ. ಸಮಗ್ರ ತನಿಖೆಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಕಲ್ಲುಗಣಿಕಾರಿಗೆ ಮಾಲೀಕ ಸೇರಿ ಮೂವರನ್ನು ಬಂಧಿಸಲಾಗಿದೆ. ಮೃತಪಟ್ಟ ಐವರು ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು ನಾಳೆ ನಾನು ಶಿವಮೊಗ್ಗದಲ್ಲಿ ಸ್ಪೋಟಕ ನಡೆದಂತ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದೇನೆ. ಈಗಾಗಲೇ ಸಚಿವ ಮುರುಗೇಶ್ ನಿರಾಣಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸ್ಥಳಕ್ಕೆ ತೆರಳಿ ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಆ ಬಗ್ಗೆ ತನಿಖೆ ನಡೆಸಿದ ನಂತರ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಹೇಳಿದ್ರು.

ತನಿಖೆಯ ಪ್ರಾಥಮಿಕ ವರದಿ ಬರಲಿ, ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಮಾಲೀಕ ಸುಧಾಕರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಮೃತರ ಕುಟುಂಬಕ್ಕೆ ಕೂಡಲೇ 5 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಮೃತರ ಕುಟುಂಬಕ್ಕೆ 5 ಲಕ್ಷ ರಾಜ್ಯ ಸರ್ಕಾರದಿಂದ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದರು.

 

Tags:

error: Content is protected !!