Belagavi

ಸಿಎಂ ಬಿಎಸ್‍ವೈ ಬದಲಾವಣೆ ಸತ್ಯಕ್ಕೆ ದೂರವಾದ ಮಾತು..ಸಚಿವ ಶಿವರಾಮ್ ಹೆಬ್ಬಾರ್

Share

 ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಮೇಲೆ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಪ್ರಶ್ನೆ ಹೇಗೆ ಉದ್ಭವಿಸುತ್ತದೆ. ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಹಾಗೂ ಪಕ್ಷವೇ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ನಾಯಕತ್ವ ಬದಲಾವಣೆ ವಿಚಾರ ನಮಗಿಂತ ಮಾಧ್ಯಮಗಳಿಗೆ ಹೆಚ್ಚು ಆಸಕ್ತಿ ಇದೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ವಿಚಾರಕ್ಕೆ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವರಾಮ್ ಹೆಬ್ಬಾರ್ ಇದು ಸತ್ಯಕ್ಕೆ ದೂರವಾದ ಸುದ್ದಿ ಎಂದು ಹತ್ತಾರು ಬಾರಿ ಎಲ್ಲರೂ ಹೇಳಿದ್ದಾರೆ. ಅದನ್ನೆ ನಾನು ಹೇಳುತ್ತಿದ್ದೇನೆ. ಯಡಿಯೂರಪ್ಪನವರು ಇನ್ನು ಎರಡೂವರೆ ವರ್ಷ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.

ಸಂಕ್ರಾಂತಿ ಬಳಿಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗುತ್ತದೆ ಎಂದು ನಿಮ್ಮದೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಿವರಾಮ್ ಹೆಬ್ಬಾರ್ ಬಸನಗೌಡ ಪಾಟೀಲ್ ಯತ್ನಾಳ್ ಬಹಳ ಸಲ ಹೇಳಿದ್ದು ಆಗಿದೆ. ಸಂಕ್ರಾಂತಿ 14ಕ್ಕೆ ಎಲ್ಲವೂ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು. ಇನ್ನು ಕಾಂಗ್ರೆಸ್ ಬಿಟ್ಟು ಹೋದವರು ಮತ್ತೆ ಕಾಂಗ್ರೆಸ್ ಕದ ತಟ್ಟುತ್ತಾರೆ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಯಿಸಿದ ಶಿವರಾಮ್ ಹೆಬ್ಬಾರ್ ದೇವರು ಡಿಕೆ ಶಿವಕುಮಾರ್‍ಗೆ ಒಳ್ಳೆಯದು ಮಾಡಲಿ ಎಂದು ಹೇಳಿದರು.

: ಸಚಿವ ಸಂಪುಟ ವಿಸ್ತರಣೆಯಲ್ಲಿ ಗೊಂದಲ ವಿಚಾರಕ್ಕೆ ಇದೇ ವೇಳೆ ಪ್ರತಿಕ್ರಯಿಸಿದ ಸಚಿವರು ಯಾವುದೇ ಪಕ್ಷ, ಯಾವುದೇ ಸರ್ಕಾರ ಇರಲಿ, ಯಾರೇ ಮುಖ್ಯಮಂತ್ರಿ ಇರಲಿ ಈ ಗೊಂದಲ ಇರುವುದು ಸಹಜ. ಬಹಳ ಜನರಿಗೆ ಮಂತ್ರಿಯಾಗಬೇಕು ಎನ್ನುವ ಅಪೇಕ್ಷೆ ಇರುತ್ತದೆ ಆದ್ರೆ ಶೇ.10ಕ್ಕಿಂತ ಹೆಚ್ಚಿಗೆ ಸಚಿವರನ್ನು ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ 35 ಜನರನ್ನು ಮಾತ್ರ ಸಚಿವರನ್ನಾಗಿ ಮಾಡಬೇಕಾಗುತ್ತದೆ. ಹೀಗಾಗಿ ಎಲ್ಲವನ್ನೂ ನಿಭಾಯಿಸುವ ಅನುಭವಿ ಮುಖ್ಯಮಂತ್ರಿ ನಮ್ಮಲ್ಲಿ ಇರುವಾಗ ಎಲ್ಲವನ್ನೂ ನಿಭಾಯಿಸುತ್ತಾರೆ. ನಾಳೆ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ವರಿಷ್ಠರ ಜೊತೆ ಚರ್ಚಿಸಿ ಸೂಕ್ತವಾದ ಸಮಯದಲ್ಲಿ ಸರಿಯಾದ ನಿರ್ಣಯ ಕೈಗೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.

ಇನ್ನು ಸಂಪುಟ ವಿಸ್ತರಣೆಯಲ್ಲಿ ನೀವು ಬೇರೆ ಖಾತೆ ಬಯಸುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವರಾಮ್ ಹೆಬ್ಬಾರ್ ರಾಜ್ಯದ ಮುಖ್ಯಮಂತ್ರಿಗಳು ಸಚಿವರನ್ನು ಯಾವ ಖಾತೆಯಲ್ಲಿ ಇರಬೇಕು, ಯಾವ ಖಾತೆ ಬದಲಾವಣೆ ಮಾಡಬೇಕು ಎನ್ನುವುದು ಎಲ್ಲವೂ ಸಿಎಂ ವಿವೇಚನೆಗೆ ಬಿಟ್ಟಿದ್ದು. ಸಚಿವ ಸಂಪುಟದಲ್ಲಿ ಕೆಲಸ ಮಾಡುವ ನಾವು ಮುಖ್ಯಮಂತ್ರಿಗಳು ಕೊಟ್ಟ ಯಾವುದೇ ಜವಾಬ್ದಾರಿ ಶ್ರದ್ಧೆಯಿಂದ ಮಾಡಬೇಕು. ನಾನು ಸಮಾಧಾನದಿಂದ ಇದ್ದೇನೆ. ಕೊಟ್ಟ ಖಾತೆಯನ್ನು ಸಮಪರ್ಕವಾಗಿ ನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.
ಒಟ್ಟಾರೆ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಯಡಿಯೂರಪ್ಪರ ಬದಲಾವಣೆ ಇಲ್ಲ. ಇನ್ನು ಎರಡೂವರೇ ವರ್ಷ ಅವರೇ ಮುಖ್ಯಮಂತ್ರಿಯಾಗಿ ಇರುವುದು ಶತಸಿದ್ಧ ಎಂದು ಸಚಿವ ಶಿವರಾಮ್ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ.

 

 

 

 

 

 

Tags:

error: Content is protected !!