ಯಡಿಯೂರಪ್ಪನವರೇ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ನಿಮ್ಮಿಂದ ಆಗಿಲ್ಲ. ಕೊಟ್ಟ ಮಾತು ಉಳಿಸಿಕೊಳ್ಳಲು ಆಗದ ನಿಮಗೆ ಆ ಸಿದ್ದಲಿಂಗೇಶ್ವರ ದೇವರು ಒಳ್ಳೆಯದು ಮಾಡೋದಿಲ್ಲ ಎಂದು ಎಂಎಲ್‍ಸಿ ಎಚ್.ವಿಶ್ವನಾಥ್ ಸಿಎಂ ಬಿಎಸ್‍ವೈ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದು ಸಂಜೆ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ಶಾಸಕರಲ್ಲಿ ಕೆಲವರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ. ಶಾಸಕ ಮುನಿರತ್ನ, ಎಂಎಲ್‍ಸಿ ಹೆಚ್. ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಅನುಮಾನವಾಗಿದೆ. ಈಗಾಗಲೇ ಅಬಕಾರಿ ಸಚಿವರಾಗಿರುವ ಹೆಚ್. ನಾಗೇಶ್ ಅವರನ್ನು ಕೂಡ ಸಂಪುಟದಿಂದ ಕೈಬಿಡಲು ನಿರ್ಧರಿಸಲಾಗಿದೆ. ಹೀಗಾಗಿ, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಎಂಎಲ್‍ಸಿ ಎಚ್.ವಿಶ್ವನಾಥ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾದ 17 ಶಾಸಕರ ಭಿಕ್ಷೆಯಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ.
ಆ ವೇಳೆ ನೀಡಿದ ಮಾತನ್ನು ಯಡಿಯೂರಪ್ಪ ಉಳಿಸಿಕೊಂಡಿಲ್ಲ. ನಮ್ಮ ತ್ಯಾಗಕ್ಕೆ ಬೆಲೆಯಿಲ್ಲದಂತಾಗಿದೆ. ಬ್ಯಾಗ್ ಹಿಡಿಯುವುದೇ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಇರುವ ಅರ್ಹತೆ ಎಂಬಂತಾಗಿದೆ. ಯಡಿಯೂರಪ್ಪ ತಮ್ಮ ನಾಲಿಗೆಯನ್ನು ಕಳೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಸಿಪಿ ಯೋಗೀಶ್ವರ್‍ಗೆ ಮಂತ್ರಿ ಸ್ಥಾನ ನೀಡುವ ವಿಚಾರಕ್ಕೂ ಎಚ್.ವಿಶ್ವನಾಥ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಬೈಟ್: