ಬಸನಗೌಡ ಪಾಟೀಲ್ ಯತ್ನಾಳ್ ಬಳಿ ಇರುವ ಸಿಡಿಗಳನ್ನು ಬಹಿರಂಗ ಪಡಿಸಲಿ ಎಂದು ಸಚಿವೆ ಶಶಿಕಲಾ ಜೊಲ್ಲೆಯವರು ಯತ್ನಾಳ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗಳತಗಾ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಸಚಿವೆ ಶಶಿಕಲಾ ಜೊಲ್ಲೆ ಶಾಸಕ ಯತ್ನಾಳ ಅವರು ಸಿಡಿಗಳನ್ನು ಬಹಿರಂಗಪಡಿಸಲಿ ಅದಕ್ಕೆ ನಾವು ನಮ್ಮ ವರಿಷ್ಠರು ಸಿದ್ದರಿದ್ದೇವೆ ಟಾಂಗ್ ಕೊಟ್ಟರು. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಶಾಸಕರ ಅಸಮಾಧಾನ ಹೆಚ್ಚಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿಗಳು ಎಲ್ಲರನ್ನೂ ಸಮಾಧಾನಪಡಿಸುವ ಕೆಲಸವನ್ನು ಮಾಡುತ್ತಾರೆ ಎಂದು ಶಶಿಕಲಾ ಜೊಲ್ಲೆ ವಿಶ್ವಾಸ ವ್ಯಕ್ತಪಡಿಸಿದರು.