ವಂಚಕ ಯುವರಾಜ್ ಖಾತೆಯಿಂದ ಕೋಟ್ಯಾಂತರ ರೂಪಾಯಿ ವರ್ಗಾವಣೆ ಕೇಸ್‍ನಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.
ಯುವರಾಜ್ ನಟಿ ರಾಧಿಕಾ ಖಾತೆಗೆ ಕೋಟ್ಯಾಂತರ ರೂ. ಹಣ ವರ್ಗಾವಣೆ ಮಾಡಿದ್ದಾನೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಧಿಕಾ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನಿನ್ನೆಯೇ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಾಧಿಕಾ ವಿಚಾರಣೆಗೆ ಸಿಸಿಬಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದ್ದು. ಸಿಸಿಬಿ ಎಸಿಪಿ ನಾಗರಾಜ್ ನೇತೃತ್ವದ ತಂಡದಿಂದ ರಾಧಿಕಾರನ್ನು ವಿಚಾರಣೆ ಮಾಡಲಾಗುತ್ತಿದೆ. ಅದೇ ರೀತಿ ನಟಿ ರಾಧಿಕಾರ ಮೊಬೈಲ್‍ನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.