ರಾಜ್ಯದಲ್ಲಿ ಬೇರೆ ಬೇರೆ ಕಾರಣಗಳಿಂದ ಹಿಂದುಳಿದ ಮಕ್ಕಳನ್ನು ಸಮಾಜದ ಮುಖ್ಯವಾಹಿತಿ ತರುವ ಕಾರ್ಯ ಮಾಡಲಾಗುತ್ತಿದೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸಿಸ್ಟರ್ ಲೂಧ್ರ್ವ ಹೇಳಿದರು.
: ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಹಾಗೂ ಬೆಳಗಾವಿ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ನಗರದ ಖಾಸಗಿ ಹೋಟೆಲ್ನಲ್ಲಿ ದೇವದಾಸಿ ಮಹಿಳೆಯರ ಮತ್ತು ಮಕ್ಕಳ ಸಮಸ್ಯೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸಿಸ್ಟರ್ ಲೂರ್ದ್ ಉದ್ಘಾಟಿಸಿದರು.
ಈ ವೇಳೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸಿಸ್ಟರ್ ಲೂರ್ದ್ ಮಾತನಾಡಿ ಏಕ ಪೆÇೀಷಕ, ಅನಾಥ, ಲೈಂಗಿಕ ದೌರ್ಜನ್ಯಕ್ಕೊಳಗಾದ, ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದ ಮಹಿಳೆಯ ಮಕ್ಕಳು ಹಾಗೂ ಹೆಚ್ಐವಿ ಪೀಡಿತ ಮಕ್ಕಳಿಗೆ ಸರ್ಕಾರಿಂದ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೇ ಅವಶ್ಯಕತೆಗೆ ತಕ್ಕಂತೆ ಮಕ್ಕಳಿಗೆ ಶಿಕ್ಷಣ ನೀಡುವುದು ಹಾಗೂ ಮಕ್ಕಳ ಕಲ್ಯಾಣ ಸಮಿತಿಗೆ ಬಂದಂತ ಮಕ್ಕಳನ್ನು ಪೆÇೀಷಕರಿಗೆ ಒಪ್ಪಿಸುವವರೆಗೆ ಕಲ್ಯಾಣ ಸಮಿತಿ ಕಾರ್ಯ ಮಾಡುತ್ತದೆ ಎಂದು ತಿಳಿಸಿದರು.
ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದ್ದಲ್ಲಿ ಕರ್ನಾಟಕದಲ್ಲಿ ಮಹಿಳೆ ಮತ್ತು ಮಕ್ಕಳ ಕಲ್ಯಾಣಕ್ಕೆ ಹೊಸ ಹೊಸ ಯೋಜನೆ ತರುವುದರ ಮೂಲಕ ಶ್ರಮಿಸಲಾಗುತ್ತಿದೆ. ಜಿಲ್ಲೆಯಲ್ಲಿ 68 ಮಕ್ಕಳು ಮಕ್ಕಳ ಕಲ್ಯಾಣ ಸಮಿತಿಯ ರಕ್ಷಣೆಯಲ್ಲಿ ಇದ್ದಾರೆ. ವೇಳೆ ಆಪ್ತ ಸಮಾಲೋಚನೆ, ಸರ್ಕಾರಿ ಸೌಲಭ್ಯ, ಶಿಕ್ಷಣ, ರಕ್ಷಣೆ ಮತ್ತು ಪೆÇೀಷಣೆ ಮಾಡಲಾಗುತ್ತಿದೆ. ಈ ಹಿಂದೆ ಭಯದಿಂದ ದೌರ್ಜನ್ಯ ಮತ್ತು ಸಮಸ್ಯೆಯಾದಲ್ಲಿ ಮುಚ್ಚಿ ಹಾಕಲಾಗುತ್ತಿರುವ ಬಗ್ಗೆ ಕೇಳಿದ್ದೇವೆ. ಆದರೆ ಮಹಿಳೆ ಮತ್ತು ಮಕ್ಕಳು ಧೈರ್ಯದಿಂದ ಮುಂದೆ ಬಂದಲ್ಲಿ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ ಎಂದರು.
ದೇವದಾಸಿ ಪುನರ್ವಸತಿ ಯೋಜನೆ ಅಧಿಕಾರಿ ಎಂ.ಕೆ.ಕುಲಕರ್ಣಿ ಮಾತನಾಡಿ, ದೇವದಾಸಿಯರ ಹೆಣ್ಣು ಮಕ್ಕಳನ್ನು ಮದುವೆಯಾದವರಿಗೆ ಐದು ಲಕ್ಷ ರೂ. ಹಾಗೂ ಗಂಡು ಮಕ್ಕಳಿಗೆ ಮೂರು ಲಕ್ಷ ರೂ. ಸರಕಾರದಿಂದ ನೀಡಲಾಗುತ್ತಿದೆ. ಶಿಕ್ಷಣದಿಂದಲೇ ದೇವದಾಸಿ ಪದ್ಧತಿ ಸೇರಿದಂತೆ ಸಮಾಜದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದು ಹಾಕಬಹುದು. 1994 ರಲ್ಲಿ ನಡೆದ ಸರ್ವೇಯಲ್ಲಿ 3,600 ಜನ ದೇವದಾಸಿಯರು ಇದ್ದಾರೆ ಎಂಬ ಮಾಹಿತಿ ಗೊತ್ತಾಗಿತ್ತು. ಅದರಲ್ಲಿ ಕೆಲವರು ಹೆಸರು ಪಟ್ಟಿಯಲ್ಲಿರಲಿಲ್ಲ. ಅದಕ್ಕಾಗಿ ಮತ್ತೆ ಸರಕಾರ 2007ರಲ್ಲಿ ಪುನಃ ಸರ್ವೇ ಮಾಡಿದ ಸಂದರ್ಭದಲ್ಲಿ 1,224 ಜನ ದೇವದಾಸಿಯರು ಪತ್ತೆಯಾಗಿದ್ದಾರೆ. ಅವರಿಗೆ ಮಾಸಾಶನ ನೀಡಲಾಗುತ್ತಿದೆ. ಜತೆಗೆ ಮನೆ ಕಟ್ಟಿಕೊಡಲು ವಿವಿಧ ಆಶ್ರಯ ಯೋಜನೆಯಡಿ ಬಹುತೇಕರಿಗೆ ಮನೆ ನೀಡಲಾಗಿದೆ. 50 ಜನರಿಗೆ ಮಾತ್ರ ಮನೆ ಮತ್ತು ನಿವೇಶನ ನೀಡಿಲ್ಲ. ಸದ್ಯದಲ್ಲಿ ಮನೆ ಮತ್ತು ನಿವೇಶನ ನೀಡಲಾಗುವುದು ಎಂದರು.
ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನ ಯೋಜನೆಯಡಿ 1 ಲಕ್ಷ ರೂಪಾಯಿ ನೀಡಲಾಗಿದೆ. ಇದೇ ರೀತಿ ಅನೇಕ ಯೋಜನೆಗಳ ಮೂಲಕ ದೇವದಾಸಿಯರ ಅಭಿವೃದ್ಧಿ ಶ್ರಮಿಸಲಾಗುತ್ತಿದೆ. 1992ರ ನಂತರ ದೇವದಾಸಿಯರಾಗಲು ಅವಕಾಶವಿಲ್ಲ. ಅಂಥವರಿಗೆ ಕಾನೂನು ಅಡಿಯಲ್ಲಿ ಶಿಕ್ಷೆ ನೀಡಲು ಅವಕಾಶವಿದೆ. ಅರ್ಹರು ಮಾತ್ರ ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸೇವಕ ಸಂಸ್ಥೆಯ ಕಾರ್ಯದರ್ಶಿ ಆನಂದ ಲೋಬೊ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ 27 ಗ್ರಾಮಗಳಲ್ಲಿ ನಡೆದ ಸರ್ವೇಯಲ್ಲಿ 608 ಮಕ್ಕಳು ಬಾಲ್ಯ ವಿವಾಹಕ್ಕೆ ಒಳಗಾಗಿದ್ದಾರೆ. ತಾಯಿ ಮರಣಕ್ಕೆ ಬಾಲ್ಯ ವಿವಾಹವೇ ಕಾರಣವಾಗಿದೆ. ಈ ರೀತಿಯ ಸಮಾಜ ಪಿಡುಗನ್ನು ಶಿಕ್ಷಣದಿಂದ ದೂರ ಮಾಡಬಹುದು. ಹಾಗಾಗಿ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.
ಅಮ್ಮ ಫೌಂಡೇಶನ ಕಾರ್ಯದರ್ಶಿ ಶೋಭಾ ಗಸ್ತಿ ಮಾತನಾಡಿ, ದೇವದಾಸಿ ಪದ್ಧತಿ ಮೂಢನಂಬಿಕೆಯಿಂದ ಬಂದಿದ್ದು, ಅದು ಕೇವಲ ಎರಡು ಜಾತಿಗೆ ಸೀಮಿತವಾಗಿರುವ ಈ ಅನಿಷ್ಠ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀಶೈಲ ಮಠದ ಮಾತನಾಡಿ, ಅನಾದಿಕಾಲದಿಂದ ಹಲವು ಅನಿಷ್ಠ ಪದ್ಧತಿಗಳು ಜಾರಿಯಲ್ಲಿರುವ ದೇವದಾಸಿ ಪದ್ಧತಿ, ಬಾಲ್ಯವಿವಾಹ ಹಾಗೂ ಭ್ರμÁ್ಟಚಾರ ಈ ಮೂರು ಪೀಡುಗುಗಳು ಸಮಾಜಕ್ಕೆ ಪೆಡಂಭೂತವಾಗಿ ಕಾಡುತ್ತಿವೆ.
ಸಮಾಜಕ್ಕೆ ಮಾರಕವಾಗಿರುವ ಪದ್ದತಿಗಳನ್ನು ನಿರ್ಮೂಲನೆ ಮಾಡಬೇಕೆಂದಲ್ಲಿ ಎಲ್ಲರೂ ಸುಶಿಕ್ಷಿತರಾಗಿ, ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಮುಂದೆ ಮಂದು ಸದೃಢ ಸಮಾಜ ನಿರ್ಮಾಣ ಮಾಡಬೇಕು ಎಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಅಧಿಕಾರಿ ರವಿ ರತ್ನಾಕರ, ಸಿಆರ್ಟಿ ಸಂಸ್ಥೆ ವೆಂಕಟೇಶ ಟಿ., ಸುಂದರವ್ವ, ಪತ್ರಕರ್ತ ಗೋಪಾಲ ಕಟಾವಕರ ಸೇರಿದಂತೆ ಮೊದಲಾದವರು ಮಾತನಾಡಿದರು.