ಹುಕ್ಕೇರಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನೂತನ ಸಚಿವ ಉಮೇಶ ಕತ್ತಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಹೌದು ದೇಶಾಧ್ಯಂತ ಕೊರೊನಾ ಲಸಿಕೆ ನೀಡುವ ಅಭಿಯಾನಕ್ಕೆ ಪ್ರಧಾನಿ ಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಅದೇ ರೀತಿ ರಾಜ್ಯ ಸೇರಿ ಬೆಳಗಾವಿ ಜಿಲ್ಲೆಯಲ್ಲಿಯೂ ಲಸಿಕೆ ನೀಡಲಾಗುತ್ತಿದೆ. ಇನ್ನು ಹುಕ್ಕೇರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ನೀಡುವ ಅಭಿಯಾನಕ್ಕೆ ಸಚಿವ ಉಮೇಶ ಕತ್ತಿ ಚಾಲನೆ ನೀಡಿದರು.
ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಸಚಿವರು ದೇಶ್ಯಾದ್ಯಂತ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರು ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ ಅದರಂತೆ ಇಂದು ಹುಕ್ಕೇರಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಮೊದಲನೆ ಹಂತದಲ್ಲಿ ಕೊರೊನಾ ವಾರಿಯರ್ಸಗಳಿಗೆ ಲಸಿಕೆ ನೀಡಲಾಗುತ್ತಿದೆ ಮುಂಬರುವ ದಿನಗಳಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುವದು ಎಂದರು.
ಖಾತೆ ಹಂಚಿಕೆ ಬಗ್ಗೆ ಪ್ರಶ್ನೆ ಕೇಳಿದಾಗ ನನಗೆ ಹಲವಾರು ಇಲಾಖೆ ಖಾತೆ ಗಳನ್ನು ನಿಭಾಯಿಸಿದ ಅನುಭವ ಇದೆ ಮುಖ್ಯ ಮಂತ್ರಿಗಳು ಯಾವುದೇ ಖಾತೆ ನೀಡಿದರು ನಿಭಾಯಿಸುತ್ತೇನೆ, ಯತ್ನಾಳ ಒಬ್ಬರು ಹಿರಿಯ ರಾಜಕಾರಣಿಗಳು ಅವರು ಯಾವುದೇ ಹೇಳಿಕೆ ನೀಡಿದರೆ ಅದಕ್ಕೆ ನಾನು ಪ್ರತಿಕ್ರಿಯೆ ನೀಡುವದಿಲ್ಲಾ ಎಂದರು.
ಈ ಸಂದರ್ಭದಲ್ಲಿ ಹಲವು ಆರೋಗ್ಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಕೊರೊನಾ ವಾರಿಯರ್ಸ್ ಉಪಸ್ಥಿತರಿದ್ದರು.