hubbali

ಹುಬ್ಬಳ್ಳಿಯಲ್ಲಿಯೂ ಮಹಾರಾಷ್ಟ್ರ ಸಿಎಂ ಉದ್ಧವ್‍ಗೆ ಚಪ್ಪಲಿ ಸೇವೆ

Share

ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ನಾಡದ್ರೋಹ ಹೇಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮಹಾರಾಷ್ಟ್ರ ಸಿಎಂ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಪ್ರತಿಕೃತಿಗೆ ಚಪ್ಪಲಿ ಸೇವೆ ಮಾಡಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕರವೇ ಅಧ್ಯಕ್ಷ ಮಂಜುನಾಥ ಲೂತಿಮಠ ಮಾತನಾಡಿ ಮುಖ್ಯಮಂತ್ರಿಯಾಗಿದ್ದವರು ಗಡಿ ವಿಚಾರವನ್ನು ಕೆದಕುವ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯನ್ನುಂಟು ಮಾಡಿದ್ದಾರೆ. ಉದ್ಧವ ಠಾಕ್ರೆ ರಾಜ್ಯದ ಜನತೆಯ ಕ್ಷಮೆ ಕೇಳುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರವೇ ಪ್ರವೀಣಶೆಟ್ಟಿ ಬಣದ ಹಲವು ಕಾರ್ಯಕರ್ತರು ಭಾಗಿಯಾಗಿದ್ದರು.

 

 

Tags:

error: Content is protected !!