ಹೊಸ ವರ್ಷದ ಮೊದಲ ದಿನವೇ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕ ಕೂಗು ಕೇಳಿ ಬಂದಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜ ಹಾರಿಸುವ ಮೂಲಕ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವನ್ನಾಗಿ ಮಾಡುವಂತೆ ಹೋರಾಟಗಾರರು ಒತ್ತಾಯಿಸಿದ್ದಾರೆ.
ಹಿರೇಬಾಗೇವಾಡಿ ಗ್ರಾಮದಲ್ಲಿ ಪೊಲೀಸ್ ರ ಕಣ್ಣು ತಪ್ಪಿಸಿ, ಉತ್ತರ ಕರ್ನಾಟಕ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷ ಅಡಿವೇಶ್ ಇಟಗಿ ನೇತೃತ್ವದಲ್ಲಿ ಪ್ರತ್ಯೇಕ ಧ್ವಜಾರೋಹಣ ಮಾಡಲಾಗಿದೆ. ಇನ್ನೂ ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜಾರೋಹಣ ಮಾಡಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿದ್ದಂತೆ ಹೋರಾಟಗಾರರು ರಾಷ್ಟ್ರಗೀತೆ ಹಾಡಿದ್ದಾರೆ. ಇದರಿಂದ ರಾಷ್ಟ್ರಗೀತೆಗೆ ಪೊಲೀಸರು ಗೌರವ ಸಲ್ಲಿಸಲು ನಿಲ್ಲುತ್ತಿದ್ದಂತೆ ಉತ್ತರ ಕರ್ನಾಟಕ ಸಮಿತಿ ಹೋರಾಟಗಾರರು ಪ್ರತ್ಯೇಕ ಧ್ವಜಾರೋಹಣ ಮಾಡಿದ್ದಾರೆ. ನಂತರ ಪೊಲೀಸರು ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಿದ ಧ್ವಜವನ್ನು ಪೊಲೀಸ್ ರು ವಶಕ್ಕೆ ಪಡೆದುಕೊಂಡಿದ್ದಾರೆ.
ಒಟ್ಟಾರೆ ವರ್ಷದ ಮೊದಲ ದಿನವೇ ಪ್ರತ್ಯೇಕ ಉತ್ತರಕರ್ನಾಟಕದ ಧ್ವಜ ಹಾರಿಸುವ ಮೂಲಕ ನಮ್ಮ ಹೋರಾಟ ಇನ್ನು ಜೀವಂತವಾಗಿದೆ ಎಂಬುದನ್ನು ಹೋರಾಟಗಾರರು ಸರ್ಕಾರಕ್ಕೆ ತೋರಿಸಿದ್ದಾರೆ.