ಸೋಮವಾರದಿಂದ ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಡಾ.ಸುಧಾಕರ್ ಕೇಂದ್ರದಿಂದ ರಾಜ್ಯಕ್ಕೆ 13.90 ಲಕ್ಷ ಡೋಸ್ ಬರಲಿದ್ದು, ಇಂದು 263 ಸ್ಥಳಗಳಲ್ಲಿ ಡ್ರೈರನ್ ಪ್ರಾರಂಭವಾಗಲಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕ್ಲಿನಿಕಲ್ ಟ್ರಯಲ್ ಸೇರಿದಂತೆ ಲಸಿಕೆಗೆ ಮೂರು ಹಂತದ ಪರಿಶೀಲನೆ ನಡೆಸಲಾಗುತ್ತದೆ. ವಿಜ್ಞಾನಿಗಳು, ಸಂಶೋಧಕರು ಮೇಲೆ ನಂಬಿಕೆ ಇಡೋಣ, ಸೋಮವಾರದಿಂದ ಎಲ್ಲರಿಗೂ ಲಸಿಕೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.