COVID-19

2 ಕೊರೊನಾ ಲಸಿಕೆ ಕಂಡು ಹಿಡಿದಿದ್ದೇವೆ..ದೇಶಾಧ್ಯಂತ ಹಂಚುತ್ತೇವೆ..ಪ್ರಧಾನಿ ಮೋದಿ

Share

2 ಕೋವಿಡ್ ಲಸಿಕೆ ತಯಾರಿಸುವಲ್ಲಿ ಭಾರತ ಯಶಸ್ವಿಯಾಗಿದೆ. ದೇಶಾದ್ಯಂತ ಜನರಿಗೆ ಕೊರೊನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಷ್ಟ್ರೀಯ ಪರಮಾಣು ಟೈಮ್‍ಸ್ಕೇಲ್ ಮತ್ತು ಭಾರತೀಯ ನಿರ್ದೇಶಕ್ ದ್ರಾವ್ಯವನ್ನು ಉದ್ಘಾಟಿಸಿದರು. ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಷನಲ್ ಮೆಟ್ರಾಲಜಿ ಕಾನ್ ಕ್ಲೇವ್‍ನಲ್ಲಿ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ಎರಡು ಸ್ವದೇಶಿ ನಿರ್ಮಿತ ಕೋವಿಡ್-19 ಲಸಿಕೆಗಳನ್ನು ಹೊರಗೆ ತರಲು ಭಾರತೀಯ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಇಡೀ ದೇಶವು ತನ್ನ ವಿಜ್ಞಾನಿಗಳ ಬಗ್ಗೆ ಹೆಮ್ಮೆಪಡುತ್ತದೆ ಎಂದು ಹೇಳಿದರು. ಇದೇ ವೇಳೆ ‘ಮೇಕ್ ಇನ್ ಇಂಡಿಯಾ’ ಉತ್ಪನ್ನಗಳಿಗೆ ಜಾಗತಿಕ ಬೇಡಿಕೆ ಮಾತ್ರವಲ್ಲ.. ಜಾಗತಿಕ ಸ್ವೀಕಾರವನ್ನೂ ಖಚಿತ ಪಡಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಮ್ಮ ದೇಶದ ವಿಜ್ಞಾನಿಗಳ ಸಾಧನೆ ಬಗ್ಗೆ ನಮಗೆ ಹೆಮ್ಮೆ ಇದೆ. ಆತ್ಮ ನಿರ್ಭರ ಯೋಜನೆಯಲ್ಲಿ ವಿಜ್ಞಾನಿಗಳ ಕೊಡುಗೆ ಅಪಾರ, ಭಾರತ ವೇಗವಾಗಿ ಅಭಿವೃದ್ಧಿಯಾಗುತ್ತಿದೆ. ವಿಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿದೆ. ಇದರಲ್ಲಿ ನಮ್ಮ ದೇಶದ ವಿಜ್ಞಾನಿಗಳ ಶ್ರಮ ಸಾಕಷ್ಟಿದೆ ಎಂದು ಪ್ರಧಾನಿ ಮೋದಿ ಪ್ರಶಂಸೆ ವ್ಯಕ್ತಪಡಿಸಿದರು.
ಭಾರತ ಮುಂದಿನ ದಿನಗಳಲ್ಲಿ ವಿದೇಶಗಳಿಗೆ ವ್ಯಾಕ್ಸಿನ್ ರಪ್ತು ಮಾಡಲಿದೆ. ಜಗತ್ತಿನಲ್ಲೇ ಅತಿದೊಡ್ಡ ಕೊರೊನಾಗೆ ಲಸಿಕೆ ನೀಡುವ ಕಾರ್ಯಕ್ರಮ ಭಾರತದಲ್ಲಿ ನಡೆಯಲಿದೆ. ಇದುವರೆಗೆ ಭಾರತ ವಿದೇಶಗಳ ಮೇಲೆ ಅವಲಂಬಿತವಾಗಿತ್ತು. ಇದೀಗ ಭಾರತದ ಮೇಲೆ ಹಲವು ದೇಶಗಳು ಅವಲಂಬಿತವಾಗಿವೆ. ಹೊವ ವರ್ಷ ಹಲವು ಅವಕಾಶಗಳನ್ನು ಹೊತ್ತು ತಂದಿದೆ. ಭಾರತದ ಎದರು ಹೊಸ ಗುರಿ, ಹೊಸ ಸವಾಲುಗಳಿವೆ. ಈಗ ಕಾಲ ಬದಲಾಗಿದೆ. ಆಮದು ಕಡಿಮೆಯಾಗಿದೆ. ರಪ್ತು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಭಾರತ ಹಲವು ವಿಚಾರಗಳಲ್ಲಿ ಜಾಗತಿಕ ನಾಯಕನಾಗಿ ಬೆಳೆಯುತ್ತಿದೆ. ಭಾರತ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿ ಹೊಂದುತ್ತಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಒಟ್ಟಾರೆ ದೇಶದಲ್ಲಿ ಎರಡು ಕೊರೊನಾ ಲಸಿಕೆಯನ್ನು ನಮ್ಮ ವಿಜ್ಞಾನಿಗಳು ಕಂಡು ಹಿಡಿದಿದ್ದು. ದೇಶದ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಹೇಳುವ ಮೂಲಕ ದೇಶದ ಜನತೆಗೆ ಪ್ರಧಾನಿ ಮೋದಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

 

Tags:

error: Content is protected !!